ಸಿಬ್ಬಂದಿಯನ್ನ ಹೆದರಿಸಿ ಮಸಾಜ್ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್
ಕಲಬುರಗಿ ಜಿಲ್ಲೆಯ ಯಡರಾಮಿಯ ಕಸ್ತೂರಿಬಾ ವಸತಿ ಶಾಲೆಯ ಮುಖ್ಯಶಿಕ್ಷಕಿ ಶಾಲಾ ಸಿಬ್ಬಂದಿಯಿಂದ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿದೆ. ಹೆದರಿಸಿ ವೈಯಕ್ತಿಕ ಕೆಲಸ ಮಾಡಿಸಿಕೊಳ್ಳುತ್ತಿರುವ ಆರೋಪ ಕೇಳಿಬಂದಿದೆ. ಸದ್ಯ ಈ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತವಾಗಿದ್ದು, ಮುಖ್ಯಶಿಕ್ಷಕಿಯನ್ನು ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ.
ಕಲಬುರಗಿ, ಜುಲೈ 20: ಕಲಬುರಗಿ (Kalaburagi) ಜಿಲ್ಲೆಯ ಯಡ್ರಾಮಿಯಲ್ಲಿರುವ ಕಸ್ತೂರಬಾ ವಸತಿ ಶಾಲೆಯ ಮುಖ್ಯಶಿಕ್ಷಕಿ ಸಿಬ್ಬಂದಿಯಿಂದ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಿಡಿಯೋ ಒಂದು ವೈರಲ್ ಆಗಿದೆ. ಸಿಬ್ಬಂದಿಯಿಂದ ಮುಖ್ಯಶಿಕ್ಷಕಿ ವಿಜಯಶ್ರೀ ಪಾಟೀಲ್ ಮಸಾಜ್ ಮಾಡಿಸಿಕೊಂಡಿದ್ದಾರೆ. ಹೆದರಿಸಿ ವೈಯಕ್ತಿಕ ಕೆಲಸ ಮಾಡಿಸಿಕೊಳ್ಳುತ್ತಿರುವ ಆರೋಪ ಕೇಳಿಬಂದಿದ್ದು, ಅಮಾನತು ಮಾಡುವಂತೆ ಜನರು ಆಗ್ರಹಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
