ಕನ್ನೇರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಕಲಬುರಗಿ ಹೈಕೋರ್ಟ್ ಪೀಠದಿಂದ ಷರತ್ತುಬದ್ಧ ಅನುಮತಿ: ಏನೆಲ್ಲ ಕಂಡಿಷನ್?
Bidar News: ಕನ್ನೇರಿ ಸ್ವಾಮೀಜಿ ಭಾಗಿಯಾಗಲಿರುವ ಬಸವಾದಿ ಶರಣರ ಹಿಂದೂ ಸಮಾವೇಶಕ್ಕೆ ಕಲಬುರಗಿ ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ. ಜೂನ್ 28ರಂದು ಬೀದರ್‌ನ ಬಸವಕಲ್ಯಾಣದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ 2500 ಜನ ಭಾಗವಹಿಸಲು ಅವಕಾಶವಿದ್ದು, ಕಾನೂನು ಸುವ್ಯವಸ್ಥೆ ಹಾಳಾಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ. ಯಾವುದೇ ಅಡಚಣೆಯಾದರೆ ಆಯೋಜಕರೇ ಹೊಣೆಗಾರರು ಎಂದು ಕೋರ್ಟ್ ಸ್ಪಷ್ಟಪಡಿಸಿದೆ.
ಮುಖ್ಯಾಂಶಗಳು
- ಕನ್ನೇರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಷರತ್ತು ಬದ್ಧ ಅನುಮತಿ
- ಷರತ್ತು ಬದ್ಧ ಅನುಮತಿ ನೀಡಿದ ಕಲಬುರಗಿ ಹೈಕೋರ್ಟ್ ಪೀಠ
- ಜೂನ್ 28ರಂದು ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ ಸಮಾವೇಶ
ಕಲಬುರಗಿ/ಬೀದರ್, ಜೂನ್ 24: ಕನ್ನೇರಿ ಶ್ರೀಗಳು ಭಾಗಿಯಾಗಲಿರುವ ಬಸವಾದಿ ಶರಣರ ಹಿಂದೂ ಸಮಾವೇಶಕ್ಕೆ ಕಲಬುರಗಿ ಹೈಕೋರ್ಟ್ ಪೀಠ ಷರತ್ತುಬದ್ಧ ಅನುಮತಿ ನೀಡಿದೆ. ಜೂನ್ 28ರಂದು ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕನ್ನೇರಿ ಸ್ವಾಮೀಜಿ ಭಾಷಣ ಮಾಡದಂತೆ ಅಫಿಡವಿಟ್ ಸಲ್ಲಿಕೆ ಹಿನ್ನೆಲೆ ಕೋರ್ಟ್ ಅನುಮತಿ ನೀಡಿದೆ. ಕಾರ್ಯಕ್ರಮದಲ್ಲಿ 2,500 ಜನ ಭಾಗಿಯಾಗಲು ನ್ಯಾಯಾಲಯ ಸಮ್ಮತಿಸಿದ್ದು, ಕಾನೂನು ಸುವ್ಯವಸ್ಥೆ ಹಾಳಾಗದಂತೆ ಕಾರ್ಯಕ್ರಮ ನಡೆಸಲು ಸೂಚಿಸಿದೆ. ಒಂದೊಮ್ಮೆ ಕಾನೂನು ಸುವ್ಯವಸ್ಥೆಗೆ ಭಂಗವಾದರೆ ಕಾರ್ಯಕ್ರಮದ ಆಯೋಜಕರೇ ನೇರ ಹೊಣೆ ಎಂದೂ ತಿಳಿಸಿದೆ. ಸ್ವಾಮೀಜಿ ಪರ ವಕೀಲ ವೆಂಕಟೇಶ್ ದಳವಾಯಿ ಮತ್ತು ಸರ್ಕಾರದ ಪರವಾಗಿ ಎಜಿ ಶಶಿಕಿರಣ್ ಶೆಟ್ಟಿ ವಾದ ಮಂಡನೆ ಮಾಡಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎಸ್. ಆರ್. ಕೃಷ್ಣಕುಮಾರ್ ಈ ಸಂಬಂಧ ಆದೇಶ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
