AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರ್ಗಿಯಲ್ಲಿ ಕನೇರಿ ಶ್ರೀಗಳ ಸಮಾವೇಶಕ್ಕೆ ತೀವ್ರ ವಿರೋಧ: ಬಸವ ತತ್ವ ಸಂಘಟನೆಗಳ ಆಕ್ರೋಶ, ಹಿಂದೂ ಮುಖಂಡರಿಂದಲೂ ಆಕ್ಷೇಪ

ಕಲಬುರ್ಗಿಯಲ್ಲಿ ಕನೇರಿ ಶ್ರೀಗಳ ಸಮಾವೇಶಕ್ಕೆ ತೀವ್ರ ವಿರೋಧ: ಬಸವ ತತ್ವ ಸಂಘಟನೆಗಳ ಆಕ್ರೋಶ, ಹಿಂದೂ ಮುಖಂಡರಿಂದಲೂ ಆಕ್ಷೇಪ

ದತ್ತಾತ್ರೇಯ ಪಾಟೀಲ್​
| Edited By: |

Updated on: Sep 24, 2026 | 9:10 PM

Share

ಕಲಬುರಗಿಯಲ್ಲಿ ಆಯೋಜಿಸಲಾಗಿರುವ ಕನ್ಹೇರಿ ಕಾಡಸಿದ್ದೇಶ್ವರ ಸ್ವಾಮೀಜಿಗಳ ಬೃಹತ್ ಹಿಂದೂ ಸಮಾವೇಶಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಬಸವ ತತ್ವ ಮತ್ತು ಸಂವಿಧಾನ ಹಿತರಕ್ಷಣಾ ವೇದಿಕೆಯು ಇದನ್ನು ಮನುವಾದಿ ಸಮಾವೇಶವೆಂದು ಖಂಡಿಸಿದ್ದರೆ, ಸ್ಥಳೀಯ ಹಿಂದೂ ಸಂಘಟನೆಗಳು ಪ್ರಮುಖ ಸ್ವಾಮೀಜಿಗಳಿಗೆ ಆಹ್ವಾನವಿಲ್ಲದ ಕಾರಣ ಇದೊಂದು ಬಿಜೆಪಿ ಸಮಾವೇಶ ಎಂದು ಆರೋಪಿಸಿವೆ.

ಕಲಬುರಗಿ, ಸೆಪ್ಟೆಂಬರ್​​ 24: ಕಲಬುರ್ಗಿಯ ಎನ್‌ವಿ ಮೈದಾನದಲ್ಲಿ ಸೆಪ್ಟೆಂಬರ್ 27ರಂದು ಕನೇರಿ ಕಾಡಸಿದ್ದೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಆಯೋಜಿಸಲಾಗಿರುವ ಬಸವಾದಿ ಶಿವಶರಣರ ಬೃಹತ್ ಹಿಂದೂ ಮಹಾಸಮಾವೇಶಕ್ಕೆ ಸಿದ್ಧತೆಗಳು ನಡೆಯುತ್ತಿದ್ದರೆ, ಇನ್ನೊಂದೆಡೆ ತೀವ್ರ ವಿರೋಧ ವ್ಯಕ್ತವಾಗಿವೆ. ಹಿಂದೂ ಸಮಾವೇಶದ ಹೆಸರಿನಲ್ಲಿ ಬಸವಾದಿ ಶರಣರ ಹೆಸರನ್ನು ಬಳಸಬಾರದು ಎಂದು ಆಗ್ರಹಿಸಿ ಬಸವತತ್ವ ಮತ್ತು ಸಂವಿಧಾನ ಹಿತರಕ್ಷಣಾ ವೇದಿಕೆ ಪ್ರತಿಭಟನೆಗೆ ಕರೆ ನೀಡಿದ್ದು, ಕೆಲ ಹಿಂದೂ ಸಂಘಟನೆಗಳ ಮುಖಂಡರೇ ಈ ಸಮಾವೇಶವನ್ನು ಬಿಜೆಪಿಯ ಕೃಪಾಪೋಷಿತ ಕಾರ್ಯಕ್ರಮವೆಂದು ಕರೆದು ಜಿಲ್ಲೆಯ ಪ್ರಮುಖ ಮಠಾಧೀಶರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿದ್ದಾರೆ. ಜೊತೆಗೆ, ಶರಣರ ವಚನಗಳನ್ನು ತಿರುಚುವ ಸಾಧ್ಯತೆಯಿದೆ ಎಂದು ಬಸವತತ್ವ ಅನುಯಾಯಿಗಳು ಆರೋಪಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ದತ್ತಾತ್ರೇಯ ಪಾಟೀಲ್​
ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More