ಕಲಬುರಗಿ: ಮಣ್ಣೂರು ಗ್ರಾಮದ ಯಲ್ಲಮ್ಮ ದೇವಿ ದೇವಸ್ಥಾನಕ್ಕೆ ಜಲದಿಗ್ಭಂಧನ

ಕಲಬುರಗಿ: ಮಣ್ಣೂರು ಗ್ರಾಮದ ಯಲ್ಲಮ್ಮ ದೇವಿ ದೇವಸ್ಥಾನಕ್ಕೆ ಜಲದಿಗ್ಭಂಧನ

ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: Ganapathi Sharma

Updated on: Aug 07, 2024 | 9:51 AM

ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿರುವುದು ಗಡಿ ಪ್ರದೇಶದ ಮತ್ತು ಭೀಮಾ ನದಿ ತೀರದ ಕರ್ನಾಟಕದ ಪ್ರದೇಶಗಳಲ್ಲಿ ಪ್ರವಾಹಕ್ಕೆ ಕಾರಣವಾಗಿದೆ. ಕಲಬುರಗಿಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮ‌ದ ಯಲ್ಲಮ್ಮದೇವಿ ದೇಗುಲ ಜಲಾವೃತಗೊಂಡಿದೆ. ದೇಗುಲಕ್ಕೆ ತೆರಳುವ ಸೇತುವೆಯೂ ಮುಳುಗಡೆಯಾಗಿದೆ. ವಿಡಿಯೋ ಇಲ್ಲಿದೆ ನೋಡಿ.

ಕಲಬುರಗಿ, ಆಗಸ್ಟ್ 7: ಮಹಾರಾಷ್ಟ್ರದ ಉಜ್ಜಿನಿ, ವೀರ ಭಟ್ಕರ್ ಡ್ಯಾಂನಿಂದ ಭೀಮಾ ನದಿಗೆ 1 ಲಕ್ಷ ಕ್ಯೂಸೆಕ್​ಗೂ ಹೆಚ್ಚು ನೀರು ಬಿಡುಗಡೆ ಮಾಡಿರುವುದರಿಂದ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮ‌ದ ಯಲ್ಲಮ್ಮದೇವಿ ದೇಗುಲ ಬಳಿಯ ಸೇತುವೆ ಮುಳುಗಡೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ಸದ್ಯ ಯಲ್ಲಮ್ಮದೇವಿ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ. ದೇಗುಲದ ಸುತ್ತಮುತ್ತ ಎಲ್ಲಿ ನೋಡಿದರೂ ಜಲರಾಶಿಯೇ ಕಾಣಿಸುತ್ತಿದೆ.

ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಅಲ್ಲಿನ ಜಲಾಶಯಗಳಿಂದ ಭೀಮಾ ನದಿಗೆ ನೀರು ಬಿಡಲಾಗುತ್ತಿದೆ. ಹೀಗಾಗಿ ಕರ್ನಾಟಕದ ಭೀಮಾ ನದಿ ತೀರದ ಪ್ರದೇಶಗಳಲ್ಲಿ ಆತಂಕದ ಸನ್ನಿವೇಶ ನಿರ್ಮಾಣ ಸೃಷ್ಟಿಯಾಗಿದೆ. ಕಲಬುರಗಿ ಮಾತ್ರವಲ್ಲದೆ ವಿಜಯಪುರ ಜಿಲ್ಲೆಯ ಚಡಚಣ ಇಂಡಿ ಆಲಮೇಲ ಹಾಗೂ ಸಿಂದಗಿ ತಾಲೂಕಿನ ಭಾಗದಲ್ಲಿ ಕೂಡ ಪ್ರವಾಹ ಭೀತಿ ಎದುರಾಗಿದೆ.

ಇದನ್ನೂ ಓದಿ: ಉಜನಿ, ವೀರ್ ಡ್ಯಾಂಗಳಿಂದ ಭೀಮಾ ನದಿಗೆ ನೀರು ಬಿಡುಗಡೆ: ವಿಜಯಪುರದ ಚಡಚಣ, ಇಂಡಿ, ಆಲಮೇಲದಲ್ಲಿ ಪ್ರವಾಹದ ಆತಂಕ

ಭೀಮಾನದಿಯಲ್ಲಿ ನೀರಿನ ಪ್ರಮಾಣ ಏರಿಕೆಯಾದ ಕಾರಣ ಕರ್ನಾಟಕ ಹಾಗೂ ಮಹಾರಾಷ್ಟ್ರದ ಸಮಾನಾಂತರದಲ್ಲಿರುವ 8 ಬಾಂದಾರ್ ಕಂ ಬ್ಯಾರೇಜ್​​ಗಳು ಮುಳುಗಡೆಯಾಗಿರುವುದಾಗಿ ಮಂಗಳವಾರ ವರದಿಯಾಗಿತ್ತು. ಕರ್ನಾಟಕದ ಗೋವಿಂದಪುರ-ಭಂಡಾರಕವಟೆ, ಉಮರಾಣಿ-ಲವಗಿ, ಚಣೆಗಾಂವ-ಬರೂರ, ಹಿಂಗಣಿ-ಆಳಗಿ ಬ್ಯಾರೇಜ್​​ಗಳು ಕೂಡ ಮmಂಗಳವಾರವೇ ಜಲಾವೃತಗೊಂಡಿದ್ದವು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ