ಕಲಬುರಗಿ ಪೊಲೀಸರ ಭರ್ಜರಿ ಕಾರ್ಯಚರಣೆ: 1.44 ಕೋಟಿ ರೂ ಮೌಲ್ಯದ 785 ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?

Edited By:

Updated on: May 07, 2026 | 10:39 PM

ಕಲಬುರಗಿ ನಗರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ, ಕಳೆದುಹೋಗಿದ್ದ 785 ಮೊಬೈಲ್ ಫೋನ್‌ಗಳನ್ನು ಯಶಸ್ವಿಯಾಗಿ ಪತ್ತೆಹಚ್ಚಿದ್ದಾರೆ. ಕೇವಲ ಎರಡು ತಿಂಗಳಲ್ಲಿ, CEIR ಪೋರ್ಟಲ್ ಬಳಸಿಕೊಂಡು, ₹1.44 ಕೋಟಿ ಮೌಲ್ಯದ ಈ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸ್ ಆಯುಕ್ತ ಡಾ. ಶರಣಪ್ಪ ಅವರು ನೂರಾರು ಮಾಲೀಕರಿಗೆ ತಮ್ಮ ಕಳೆದುಹೋದ ಫೋನ್‌ಗಳನ್ನು ಹಸ್ತಾಂತರಿಸಿದರು.

ಕಲಬುರಗಿ, ಮೇ 07: ನಗರ ಪೊಲೀಸರು ಕಳೆದ ಎರಡು ತಿಂಗಳಲ್ಲಿ ನಡೆಸಿದ ವಿಶೇಷ ಕಾರ್ಯಾಚರಣೆಯ ಮೂಲಕ ಸಿಇಐಆರ್ (CEIR) ಪೋರ್ಟಲ್ ಬಳಸಿ ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ಕಳೆದುಹೋಗಿದ್ದ ದಾಖಲೆ ಮಟ್ಟದ ಬರೋಬ್ಬರಿ 1,44,90,000 ರೂ ಮೌಲ್ಯದ 785 ಮೊಬೈಲ್ ಫೋನ್‌ಗಳನ್ನು ಯಶಸ್ವಿಯಾಗಿ ಪತ್ತೆಹಚ್ಚಿದ್ದಾರೆ. ವಿವಿಧ ಕಂಪನಿಗಳ ಈ ಕೋಟ್ಯಂತರ ರೂ ಮೌಲ್ಯದ ಮೊಬೈಲ್ ಫೋನ್‌ಗಳನ್ನು ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ, ಮಾಲೀಕರಿಗೆ ಅಧಿಕೃತವಾಗಿ ಹಸ್ತಾಂತರಿಸಿದ್ದಾರೆ. ಇಷ್ಟು ಕಡಿಮೆ ಅವಧಿಯಲ್ಲಿ ಭಾರಿ ಪ್ರಮಾಣದ ಮೊಬೈಲ್ ಫೋನ್‌ಗಳನ್ನು ಮರಳಿ ವಾರಸುದಾರರಿಗೆ ತಲುಪಿಸಿರುವುದು ಪೊಲೀಸ್ ಇಲಾಖೆಯ ದಕ್ಷತೆಗೆ ಸಾಕ್ಷಿಯಾಗಿದೆ. ತಾಂತ್ರಿಕ ನೆರವಿನೊಂದಿಗೆ ಕಳೆದುಹೋದ ಮೊಬೈಲ್​​ಗಳನ್ನು ಪತ್ತೆ ಹಚ್ಚಲಾಗಿದೆ. ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಲು ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಹೇಳಿದ್ದಾರೆ. ಕಡಿಮೆ ಬೆಲೆಗೆ ಸಿಗುತ್ತದೆ ಎಂದು ಬಿಲ್ ಇಲ್ಲದ ಅಥವಾ ಸೂಕ್ತ ದಾಖಲೆಗಳಿಲ್ಲದ ಮೊಬೈಲ್ ಫೋನ್‌ಗಳನ್ನು ಯಾರೂ ಖರೀದಿಸಬಾರದು. ಒಂದು ವೇಳೆ ಕಳ್ಳತನದ ಫೋನ್ ಎಂದು ತಿಳಿದಿದ್ದರೂ ಖರೀದಿಸಿದರೆ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More