Kalaburgi Accident: ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದು ಮೃತನ ತಂದೆ ಗೋಳು!
ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ದಾರುಣವಾಗಿ ಮೃತಪಟ್ಟಿದ್ದಾರೆ. ಮಧ್ಯರಾತ್ರಿ ಸಂಭವಿಸಿದ ಈ ದುರ್ಘಟನೆಯಲ್ಲಿ ಕ್ರೂಸರ್ ವಾಹನ ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಕ್ರೂಸರ್‌ನಲ್ಲಿದ್ದ ಹುಸೇನ್, ಮಹಬೂಬ್, ತೋಲುಸಾಬ್, ರಸೂಲ್ ಬೀ, ಫಾತೀಮಾ ಅಲಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತರೆಲ್ಲರೂ ಚಿತ್ತಾಪುರದ ಇಂಗಳಗಿ ಗ್ರಾಮದ ನಿವಾಸಿಗಳಾಗಿದ್ದಾರೆ.
ಕಲಬುರಗಿ, ಮೇ 23: ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ದಾರುಣವಾಗಿ ಮೃತಪಟ್ಟಿದ್ದಾರೆ. ಮಧ್ಯರಾತ್ರಿ ಸಂಭವಿಸಿದ ಈ ದುರ್ಘಟನೆಯಲ್ಲಿ ಕ್ರೂಸರ್ ವಾಹನ ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಕ್ರೂಸರ್‌ನಲ್ಲಿದ್ದ ಹುಸೇನ್, ಮಹಬೂಬ್, ತೋಲುಸಾಬ್, ರಸೂಲ್ ಬೀ, ಫಾತೀಮಾ ಅಲಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತರೆಲ್ಲರೂ ಚಿತ್ತಾಪುರದ ಇಂಗಳಗಿ ಗ್ರಾಮದ ನಿವಾಸಿಗಳಾಗಿದ್ದಾರೆ.
ಮೃತರಲ್ಲೊಬ್ಬರ ತಂದೆಯು ಈ ಘಟನೆಯ ಬಗ್ಗೆ ಮಾಹಿತಿ ನೀಡಿದ್ದು, ತಮ್ಮ ಪುತ್ರ ಸುಮಾರು ಆರು-ಏಳು ವರ್ಷಗಳಿಂದ ವಾಹನ ಚಲಾಯಿಸುತ್ತಿದ್ದನೆಂದು ತಿಳಿಸಿದ್ದಾರೆ. ರಾತ್ರಿ ಎಂಟು ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಫೋನ್ ಮೂಲಕ ತಿಳಿಸಲಾಗಿತ್ತು. ನಂತರ ಮುಂಜಾನೆ ಎರಡು ಗಂಟೆ ಸುಮಾರಿಗೆ ಅಪಘಾತದ ಸುದ್ದಿ ತಿಳಿದಿದೆ ಎಂದು ಹೇಳಿದ್ದಾರೆ. ಸೊಸೆ ಗರ್ಭಿಣಿ, ಈ ಸಂದರ್ಭದಲ್ಲಿ ಮಗನನ್ನು ಕಳೆದುಕೊಂಡ ಕುಟುಂಬದ ಸ್ಥಿತಿ ಕರುಣಾಜನಕವಾಗಿದೆ.

