Kalaburgi Accident: ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದು ಮೃತನ ತಂದೆ ಗೋಳು!

Edited By:

Updated on: May 23, 2026 | 11:09 AM

ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ದಾರುಣವಾಗಿ ಮೃತಪಟ್ಟಿದ್ದಾರೆ. ಮಧ್ಯರಾತ್ರಿ ಸಂಭವಿಸಿದ ಈ ದುರ್ಘಟನೆಯಲ್ಲಿ ಕ್ರೂಸರ್ ವಾಹನ ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಕ್ರೂಸರ್‌ನಲ್ಲಿದ್ದ ಹುಸೇನ್, ಮಹಬೂಬ್, ತೋಲುಸಾಬ್, ರಸೂಲ್ ಬೀ, ಫಾತೀಮಾ ಅಲಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತರೆಲ್ಲರೂ ಚಿತ್ತಾಪುರದ ಇಂಗಳಗಿ ಗ್ರಾಮದ ನಿವಾಸಿಗಳಾಗಿದ್ದಾರೆ.

ಕಲಬುರಗಿ, ಮೇ 23: ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ದಾರುಣವಾಗಿ ಮೃತಪಟ್ಟಿದ್ದಾರೆ. ಮಧ್ಯರಾತ್ರಿ ಸಂಭವಿಸಿದ ಈ ದುರ್ಘಟನೆಯಲ್ಲಿ ಕ್ರೂಸರ್ ವಾಹನ ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಕ್ರೂಸರ್‌ನಲ್ಲಿದ್ದ ಹುಸೇನ್, ಮಹಬೂಬ್, ತೋಲುಸಾಬ್, ರಸೂಲ್ ಬೀ, ಫಾತೀಮಾ ಅಲಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತರೆಲ್ಲರೂ ಚಿತ್ತಾಪುರದ ಇಂಗಳಗಿ ಗ್ರಾಮದ ನಿವಾಸಿಗಳಾಗಿದ್ದಾರೆ.

ಮೃತರಲ್ಲೊಬ್ಬರ ತಂದೆಯು ಈ ಘಟನೆಯ ಬಗ್ಗೆ ಮಾಹಿತಿ ನೀಡಿದ್ದು, ತಮ್ಮ ಪುತ್ರ ಸುಮಾರು ಆರು-ಏಳು ವರ್ಷಗಳಿಂದ ವಾಹನ ಚಲಾಯಿಸುತ್ತಿದ್ದನೆಂದು ತಿಳಿಸಿದ್ದಾರೆ. ರಾತ್ರಿ ಎಂಟು ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಫೋನ್ ಮೂಲಕ ತಿಳಿಸಲಾಗಿತ್ತು. ನಂತರ ಮುಂಜಾನೆ ಎರಡು ಗಂಟೆ ಸುಮಾರಿಗೆ ಅಪಘಾತದ ಸುದ್ದಿ ತಿಳಿದಿದೆ ಎಂದು ಹೇಳಿದ್ದಾರೆ. ಸೊಸೆ ಗರ್ಭಿಣಿ, ಈ ಸಂದರ್ಭದಲ್ಲಿ ಮಗನನ್ನು ಕಳೆದುಕೊಂಡ ಕುಟುಂಬದ ಸ್ಥಿತಿ ಕರುಣಾಜನಕವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More