ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಕಲಬುರಗಿ ಜಿಲ್ಲೆಯ ಚಿಂಚೋಳಿ-ತೆಲಂಗಾಣ ರಾಜ್ಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ಸಿಮೆಂಟ್ ಟ್ಯಾಂಕರ್, ಬಸ್ ಮತ್ತು ಆಟೋ ನಡುವೆ ಡಿಕ್ಕಿ ಸಂಭವಿಸಿ, ಹತ್ತು ಮಂದಿ ಗಾಯಗೊಂಡಿದ್ದಾರೆ. ಆಟೋ ಚಾಲಕನ ಸ್ಥಿತಿ ಗಂಭೀರವಾಗಿದ್ದು, ಉಳಿದ ಒಂಬತ್ತು ಜನ ಬಸ್ ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಚಿಂಚೋಳಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ, ಏಪ್ರಿಲ್ 24: ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಚಿಂಚೋಳಿ-ತೆಲಂಗಾಣ ರಾಜ್ಯ ಹೆದ್ದಾರಿಯಲ್ಲಿ ಇಂದು ಭೀಕರ ಸರಣಿ ಅಪಘಾತ ಸಂಭವಿಸಿದೆ. ಸಿಮೆಂಟ್ ಟ್ಯಾಂಕರ್, ಖಾಸಗಿ ಬಸ್ ಹಾಗೂ ಆಟೋ ನಡುವೆ ನಡೆದ ಈ ಅಪಘಾತದಲ್ಲಿ ಹತ್ತು ಜನರು ಗಾಯಗೊಂಡಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ತೆಲಂಗಾಣದ ತಾಂಡೂರು ಕಡೆಯಿಂದ ಚಿಂಚೋಳಿ ಕಡೆಗೆ ಬರುತ್ತಿದ್ದ ಸಿಮೆಂಟ್ ಟ್ಯಾಂಕರ್, ಎದುರಿಗಿದ್ದ ಆಟೋಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿದೆ. ಈ ವೇಳೆ ನಿಯಂತ್ರಣ ತಪ್ಪಿದ ಟ್ಯಾಂಕರ್, ಚಿಂಚೋಳಿಯಿಂದ ವೆಂಕಟಾಪುರಕ್ಕೆ ಹೊರಟಿದ್ದ ಬಸ್ಸಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಆಟೋ ಕೂಡ ಜಖಂಗೊಂಡಿದೆ. ಸದ್ಯ ಗಾಯಾಳುಗಳನ್ನ ಚಿಂಚೋಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us