7 ದಿನದ ಕಂದಮ್ಮ, ಬಾಣಂತಿ ಹೆಂಡ್ತಿಯನ್ನು ಬಿಟ್ಟು ದೇಶ ಸೇವೆಗೆ ತೆರಳಿದ ಕಲಬುರಗಿ ಯೋಧ

Updated on: May 11, 2025 | 12:41 PM

ಹೆಂಡತಿ ಡೆಲಿವರಿಗಾಗಿ ರಜೆ ಮೇಲೆ ಬಂದಿದ್ದ ಕಲಬುರಗಿ ಮೂಲದ CRPF ಯೋಧ ಹಣಮಂತರಾಯ್ ಔಸೆ ಅವರು ವಾಪಸ್ ಸೇವೆಗೆ ತೆರಳುತ್ತಿದ್ದಾರೆ. ವಾರದ ಹಿಂದಷ್ಟೇ ಹಣಮಂತರಾಯ್ ಅವರ ಪತ್ನಿಗೆ ಗಂಡು ಮಗು ಜನನವಾಗಿದೆ. ರಜೆ ಅವಧಿಯಲ್ಲಿ ಕೇವಲ 15 ದಿನ ಕಳೆದಿದೆ. ಭಾರತೀಯ ಸೇನೆ ತುರ್ತು ಸೇವೆಗೆ ಆಗಮಿಸುವಂತೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ದೇಶ ಸೇವೆಗೆ ಯೋಧ ಮರಳಿದ್ದಾರೆ.

ಕಲಬುರಗಿ, (ಮೇ 11): ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ಮತ್ತೆ ಭಾರತದ ಮೇಲೆ ದಾಳಿ ನಡೆಸುತ್ತಿದೆ. ಈ ಸಂದರ್ಭದಲ್ಲಿ ಹೆಂಡತಿ ಡೆಲಿವರಿಗಾಗಿ ರಜೆ ಮೇಲೆ ಬಂದಿದ್ದ ಕಲಬುರಗಿ ಮೂಲದ CRPF ಯೋಧ ಹಣಮಂತರಾಯ್ ಔಸೆ ಅವರು ವಾಪಸ್ ಸೇವೆಗೆ ತೆರಳುತ್ತಿದ್ದಾರೆ. ವಾರದ ಹಿಂದಷ್ಟೇ ಹಣಮಂತರಾಯ್ ಅವರ ಪತ್ನಿಗೆ ಗಂಡು ಮಗು ಜನನವಾಗಿದೆ. ರಜೆ ಅವಧಿಯಲ್ಲಿ ಕೇವಲ 15 ದಿನ ಕಳೆದಿದೆ. ಭಾರತೀಯ ಸೇನೆ ತುರ್ತು ಸೇವೆಗೆ ಆಗಮಿಸುವಂತೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ದೇಶ ಸೇವೆಗೆ ಯೋಧ ಮರಳಿದ್ದಾರೆ. ಈ ವೇಳೆ ಮಾತನಾಡಿದ ಯೋಧ ಣಮಂತರಾಯ್, ನನಗೆ ಮಗು, ಮನೆ, ಕುಟುಂಬಕ್ಕಿಂತ ದೇಶ ಮುಖ್ಯ. ನಾನು ಸೇನೆಗೆ ಸೇರುವ ಮುನ್ನ ನನಗೆ ಇದೇ ವೇದವಾಕ್ಯ. ಹಾಗಾಗಿ ದೇಶ ಸೇವೆಗಾಗಿ ತೆರಳುತ್ತಿದ್ದೇನೆ ಎಂದಿದ್ದಾರೆ.