ಕಲಬುರಗಿ: ಟ್ಯಾಂಕರ್ ಲಾರಿ, ಕಾರು, ಬೈಕ್ ಮಧ್ಯೆ ಭೀಕರ ಅಪಘಾತ; ಸ್ಥಳದಲ್ಲೇ ನಾಲ್ವರು ಸಾವು
Kalaburagi Accident: ಕಲಬುರಗಿ ಹೊರವಲಯದ ಅವರಾದ ಗ್ರಾಮದಲ್ಲಿ ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯ ಅಂಕಲಗಿ ಮತ್ತು ಔರಾದ್ ಬಳಿ ಟ್ಯಾಂಕರ್, ಕಾರು ಮತ್ತು ಬೈಕ್ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಗಾಯಗೊಂಡಿದ್ದಾರೆ. ಒಬ್ಬ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಲಬುರಗಿ, ನವೆಂಬರ್ 8: ಕಲಬುರಗಿ ತಾಲೂಕಿನ ಅವರಾದ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಕಲಬುರಗಿ ನಗರದ ಹೊರವಲಯದಲ್ಲಿರುವ ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯ ಅಂಕಲಗಿ ಮತ್ತು ಔರಾದ್ ಬಳಿ ಟ್ಯಾಂಕರ್, ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಮೃತರಲ್ಲಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಸಿರಡೋಣ ಗ್ರಾಮದ ನಾಗೇಂದ್ರ ಮತ್ತು ಶಿವಾನಂದ ಅಪ್ಪಾರಾವ ಸೇರಿದ್ದಾರೆ. ಸಿರಡೋಣ ಗ್ರಾಮದ ಇವರು ಕೂಲಿ ಕೆಲಸ ಮುಗಿಸಿಕೊಂಡು ಒಂದೇ ಬೈಕ್‌ನಲ್ಲಿ ತಮ್ಮ ಗ್ರಾಮಕ್ಕೆ ಹಿಂತಿರುಗುತ್ತಿದ್ದರು. ಕಾರಿನಲ್ಲಿದ್ದ ಬಾಲ್ಕಿ ಮೂಲದ ದತ್ತಾತ್ರೇಯ ಚಿಮಾಜಿ (48), ಚಂದ್ರಕಲಾ (70) ಸಾವಿಗೀಡಾಗಿದ್ದಾರೆ. ಸದ್ಯ ನಾಲ್ವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನೂ ಘಟನೆಯಲ್ಲಿ ಬೈಕ್‌ನಲ್ಲಿದ್ದ ಇನ್ನೊಬ್ಬ ಯುವಕ ಉತ್ತಮ ಮೈಲಾರಿ ಅವರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ತಕ್ಷಣವೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಸಂಬಂಧ ಕಲಬುರಗಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತಕ್ಕೆ ನಿಖರ ಕಾರಣ ಏನೆಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
