ಕಲಬುರಗಿ: ಟ್ಯಾಂಕರ್ ಲಾರಿ, ಕಾರು, ಬೈಕ್ ಮಧ್ಯೆ ಭೀಕರ ಅಪಘಾತ; ಸ್ಥಳದಲ್ಲೇ ನಾಲ್ವರು ಸಾವು

Edited By:

Updated on: Nov 08, 2025 | 8:26 AM

Kalaburagi Accident: ಕಲಬುರಗಿ ಹೊರವಲಯದ ಅವರಾದ ಗ್ರಾಮದಲ್ಲಿ ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯ ಅಂಕಲಗಿ ಮತ್ತು ಔರಾದ್ ಬಳಿ ಟ್ಯಾಂಕರ್, ಕಾರು ಮತ್ತು ಬೈಕ್ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಗಾಯಗೊಂಡಿದ್ದಾರೆ. ಒಬ್ಬ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಲಬುರಗಿ, ನವೆಂಬರ್ 8: ಕಲಬುರಗಿ ತಾಲೂಕಿನ ಅವರಾದ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಕಲಬುರಗಿ ನಗರದ ಹೊರವಲಯದಲ್ಲಿರುವ ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯ ಅಂಕಲಗಿ ಮತ್ತು ಔರಾದ್ ಬಳಿ ಟ್ಯಾಂಕರ್, ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಮೃತರಲ್ಲಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಸಿರಡೋಣ ಗ್ರಾಮದ ನಾಗೇಂದ್ರ ಮತ್ತು ಶಿವಾನಂದ ಅಪ್ಪಾರಾವ ಸೇರಿದ್ದಾರೆ. ಸಿರಡೋಣ ಗ್ರಾಮದ ಇವರು ಕೂಲಿ ಕೆಲಸ ಮುಗಿಸಿಕೊಂಡು ಒಂದೇ ಬೈಕ್‌ನಲ್ಲಿ ತಮ್ಮ ಗ್ರಾಮಕ್ಕೆ ಹಿಂತಿರುಗುತ್ತಿದ್ದರು. ಕಾರಿನಲ್ಲಿದ್ದ ಬಾಲ್ಕಿ ಮೂಲದ ದತ್ತಾತ್ರೇಯ ಚಿಮಾಜಿ (48), ಚಂದ್ರಕಲಾ (70) ಸಾವಿಗೀಡಾಗಿದ್ದಾರೆ. ಸದ್ಯ ನಾಲ್ವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಲಬುರಗಿಯ ಜಿಮ್ಸ್‌ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನೂ ಘಟನೆಯಲ್ಲಿ ಬೈಕ್‌ನಲ್ಲಿದ್ದ ಇನ್ನೊಬ್ಬ ಯುವಕ ಉತ್ತಮ ಮೈಲಾರಿ ಅವರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ತಕ್ಷಣವೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಸಂಬಂಧ ಕಲಬುರಗಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತಕ್ಕೆ ನಿಖರ ಕಾರಣ ಏನೆಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More