ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರೈಲ್ವೆ ಇಲಾಖೆ, ರಾಜ್ಯ ಖಾತೆ ಸಚಿವ ವಿ ಸೋಮಣ್ಣ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿದ್ದಾರೆ. ರೈಲ್ವೆ ಇಲಾಖೆ ಕೆಲಸಗಳಿಗೆ ಸಂಬಂಧಪಟ್ಟಂತೆ ಸಿದ್ದರಾಮಯ್ಯನವರು ಎಲ್ಲ ರೀತಿಯ ಸಹಕಾರ ನೀಡುತ್ತಿದ್ದಾರೆ ಎಂದು ಸೋಮಣ್ಣ ಹೇಳಿದ್ದಾರೆ. ಸೋಮಣ್ಣ ಮಾತಿನ ವಿಡಿಯೋ ಇಲ್ಲಿದೆ.
ಕಲಬುರಗಿ, ಜೂನ್ 1: ರಾಜ್ಯದದಲ್ಲಿ 61 ಅಮೃತ್ ಭಾರತ ರೈಲ್ವೇ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿವೆ ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಹೇಳಿದರು. ಕಲಬುರಗಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ರಾಜ್ಯಕ್ಕೆ ನಮ್ಮ ಸರ್ಕಾರ ಬಹಳಷ್ಟು ಕೊಡುಗೆಯನ್ನು ನೀಡುತ್ತಿದೆ. 7 ಸಾವಿರ ಕೋಟಿ ರೂ. ಅನುದಾನವನ್ನು ನಾವು ಕೊಡುತ್ತಿದ್ದೇವೆ. ಯುಪಿಎ ಸರ್ಕಾರಕ್ಕಿಂತ ಹೆಚ್ಚಿನ ಅನುದಾನವನ್ನು ನೀಡುತ್ತಿದ್ದೆವೆ ಎಂದರು. ಜತೆಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊಗಳಿದರು.
ಕರ್ನಾಟಕದ ರೈಲ್ವೆ ಯೋಜನೆಗಳಿಗೆ ಸಂಬಂಧಿಸಿದ ಭೂಸ್ವಾಧೀನದಂತಹ ಪ್ರಕ್ರಿಯೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲ ರೀತಿಯಿಂದ ಸ್ಪಂದಿಸುತ್ತಿದ್ದಾರೆ ಮತ್ತು ನೆರವು ನೀಡುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ ರೈಲ್ವೆ ಇಲಾಖೆ ಯೋಜನೆಗಳು ವೇಗವಾಗಿ ಅನುಷ್ಠಾನಗೊಳ್ಳುತ್ತಿವೆ ಎಂದು ಅವರು ಹೇಳಿದರು.