AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್; ಸ್ವಇಚ್ಛೆಯಿಂದಲೇ ಹೋಗಿದ್ದಾಳೆ ಎಂದ ಖರ್ಗೆ

ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್; ಸ್ವಇಚ್ಛೆಯಿಂದಲೇ ಹೋಗಿದ್ದಾಳೆ ಎಂದ ಖರ್ಗೆ

ದತ್ತಾತ್ರೇಯ ಪಾಟೀಲ್​
| Edited By: |

Updated on:Sep 19, 2026 | 5:52 PM

Share

ಕಲಬುರಗಿ ಯುವತಿ ಸುರೇಖಾ ಪವಾರ್ ಬಾಂಗ್ಲಾದೇಶಕ್ಕೆ ನಾಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಯುವತಿ ಸ್ವಇಚ್ಛೆಯಿಂದಲೇ ಬಾಂಗ್ಲಾದೇಶಕ್ಕೆ ಹೋಗಿರುವುದಾಗಿ ಪತ್ರ ಬರೆದಿದ್ದಾರೆ. ಅಲ್ಲದೆ, ಪೋಷಕರು ದೂರು ನೀಡಿದಾಗಲೂ, ಕಾಣೆಯಾಗಿಲ್ಲ, ಸ್ವಇಚ್ಛೆಯಿಂದ ಹೋಗಿದ್ದೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ ಎಂದು ಖರ್ಗೆ ಸ್ಪಷ್ಟಪಡಿಸಿದ್ದಾರೆ.

ಕಲಬುರಗಿ, ಸೆಪ್ಟೆಂಬರ್​​ 19: ನಗರದ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ‘ನೆಕ್ಸ್ಟ್ ಜನ್’ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ಹೀರೆನಂದೂರ್ ತಾಂಡಾದ ಯುವತಿಯನ್ನ ಅದೇ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಪ್ರೀತಿಸುವ ನಾಟಕವಾಡಿ ಬಾಂಗ್ಲಾದೇಶಕ್ಕೆ ಕರೆದೊಯ್ದು ಚಿತ್ರಹಿಂಸೆ ನೀಡಿರುವ ಆರೋಪ ಕೇಳಿಬಂದೆ. ಈ ಕುರಿತಾಗಿ ವಿಶ್ವವಿದ್ಯಾಲಯ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ. ಮನೆ ಬಿಟ್ಟು ಹೋದ ಬಳಿಕ ಯುವತಿ ತನ್ನ ಸಹೋದರನಿಗೆ ಪತ್ರ ಬರೆದು ತನಗಾಗುತ್ತಿರುವ ಕಿರುಕುಳದ ಬಗ್ಗೆ ತಿಳಿಸಿದ್ದಾರೆ. ಇನ್ನು ಈ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ‘ಈ ಘಟನೆ ನಡೆದು ಕೆಲವು ತಿಂಗಳುಗಳೇ ಕಳೆದಿದ್ದು, ಪೋಷಕರು ಹಿಂದೆ ದೂರು ನೀಡಿದ್ದಾಗ ಕಾನೂನು ಪ್ರಕಾರ ಪೊಲೀಸರು ಯುವತಿಯನ್ನು ಸಂಪರ್ಕಿಸಿದ ವೇಳೆ ತಾನು ಕಾಣೆಯಾಗಿಲ್ಲ, ಸ್ವಇಚ್ಛೆಯಿಂದಲೇ ಬಂದಿರುವುದಾಗಿ ತಿಳಿಸಿದ್ದಾಳೆ. ಹೀಗೆ ಸ್ವಂತ ನಿರ್ಧಾರದಿಂದ ಹೋದಾಗ ನಾವೇನು ಮಾಡಲು ಸಾಧ್ಯವಿಲ್ಲ’ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Sep 19, 2026 05:52 PM

Follow Us
ದತ್ತಾತ್ರೇಯ ಪಾಟೀಲ್​
ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More