ಶಹಬಾದ್​ನಲ್ಲಿ ಚೌಡಯ್ಯ ಮೂರ್ತಿ ಭಗ್ನ ; ಉದ್ವಿಘ್ನ ಪರಿಸ್ಥಿತಿ ನಿರ್ಮಾಣ

Edited By:

Updated on: Oct 10, 2025 | 3:11 PM

ಕಲಬುರಗಿ ಜಿಲ್ಲೆ ಶಹಬಾದ್ ತಾಲೂಕಿನ ಮುತ್ತಗಾ ಗ್ರಾಮದಲ್ಲಿ ಕಿಡಿಗೇಡಿಗಳು ಅಂಬಿಗರ ಚೌಡಯ್ಯ ಮೂರ್ತಿ ಭಗ್ನ ಮಾಡಿದ್ದು, ಜಿಲ್ಲೆಯಲ್ಲೀಗ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದೆ. ದುಷ್ಕರ್ಮಿಗಳು ಕಲ್ಲಿನಿಂದ ಮೂರ್ತಿಯ ಕೈ ಕಟ್ ಮಾಡಿದ್ದಾರೆ. ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ನೂರಾರು ಜನರು ಪ್ರತಿಭಟನೆಗಿಳಿದಿದ್ದಾರೆ.

ಕಲಬುರಗಿ, ಅಕ್ಟೋಬರ್ 10: ಕಲಬುರಗಿ ಜಿಲ್ಲೆ ಶಹಬಾದ್ ತಾಲೂಕಿನ ಮುತ್ತಗಾ ಗ್ರಾಮದಲ್ಲಿ ಕಿಡಿಗೇಡಿಗಳು ಅಂಬಿಗರ ಚೌಡಯ್ಯ ಮೂರ್ತಿ ಭಗ್ನ ಮಾಡಿದ್ದು, ಜಿಲ್ಲೆಯಲ್ಲೀಗ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದೆ. ದುಷ್ಕರ್ಮಿಗಳು ಕಲ್ಲಿನಿಂದ ಮೂರ್ತಿಯ ಕೈ ಕಟ್ ಮಾಡಿದ್ದಾರೆ. ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕಲಬುರಗಿ-ಶಹಬಾದ್ ರಸ್ತೆ ತಡೆದು ಭಂಕೂರು ಕ್ರಾಸ್ ಬಳಿ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ‌ ಮಾಡಿದ್ದಾರೆ. ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ನೂರಾರು ಜನರು ಪ್ರತಿಭಟನೆಗಿಳಿದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 10, 2025 02:31 PM
Loading...
Unable to load recommendations.
Follow Us
ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More