ಕುಡಿದು ಮಠದಲ್ಲಿ ಸ್ವಾಮೀಜಿ ರಂಪಾಟ: ಮತ್ತಿನಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶ್ರೀ

Updated on: Dec 22, 2025 | 7:03 PM

ಶಂಕರಲಿಂಗೇಶ್ವರ ಸಂಸ್ಥಾನದ ಹಿರೇಮಠದ ಶಾಂತಲಿಂಗ ಶಿವಾಚಾರ್ಯ ಕುಡಿದು ರಂಪಾಟ ಮಾಡಿದ್ದಾರೆ. ಕೆಲ ತಿಂಗಳಿನಿಂದ ನಾಪತ್ತೆಯಾಗಿದ್ದ ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಉಡಚಣ ಗ್ರಾಮದ ಮಠದ ಶಾಂತಲಿಂಗ ಶಿವಾಚಾರ್ಯ, ಇದೀಗ ದಿಢೀರ್ ಮಠದಲ್ಲಿ ಪ್ರತ್ಯಕ್ಷರಾಗಿದ್ದಾರೆ. ಮಠಕ್ಕೆ ಹೊಸ ಪೀಠಾಧಿಪತಿ ನೇಮಕದ ಬಗ್ಗೆ ಚರ್ಚೆ ನಡೆಯುತ್ತಿರುವ ಸುದ್ದಿ ತಿಳಿದು ಸ್ವಾಮೀಜಿ ಮಠಕ್ಕೆ ವಾಪಸ್ ಆಗಿದ್ದಾರೆ. ಆದ್ರೆ, ಕುಡಿದು ಮಠದ ಆವರಣದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಈ ಮೂಲಕ ತಮ್ಮ ವಿರೋಧಿಗಳನ್ನ ಹೆದರಿಸಲು ಗುಂಡು ಹಾರಿಸಿದ್ರಾ ಎನ್ನುವ ಚರ್ಚೆಗಳು ನಡೆದಿದ್ದು, ಸದ್ಯ ಗುಂಡು ಹಾರಿಸಿರುವ ವಿಡಿಯೋ ವೈರಲ್ ಆಗಿದೆ.

ಕಲಬುರಗಿ, (ಡಿಸೆಂಬರ್ 22): ಶಂಕರಲಿಂಗೇಶ್ವರ ಸಂಸ್ಥಾನದ ಹಿರೇಮಠದ ಶಾಂತಲಿಂಗ ಶಿವಾಚಾರ್ಯ ಕುಡಿದು ರಂಪಾಟ ಮಾಡಿದ್ದಾರೆ. ಕೆಲ ತಿಂಗಳಿನಿಂದ ನಾಪತ್ತೆಯಾಗಿದ್ದ ಕಲಬುರಗಿ (Kalaburgi) ಜಿಲ್ಲೆ ಅಫಜಲಪುರ ತಾಲೂಕಿನ ಉಡಚಣ ಗ್ರಾಮದ ಮಠದ ಶಾಂತಲಿಂಗ ಶಿವಾಚಾರ್ಯ, ಇದೀಗ ದಿಢೀರ್ ಮಠದಲ್ಲಿ ಪ್ರತ್ಯಕ್ಷರಾಗಿದ್ದಾರೆ. ಮಠಕ್ಕೆ ಹೊಸ ಪೀಠಾಧಿಪತಿ ನೇಮಕದ ಬಗ್ಗೆ ಚರ್ಚೆ ನಡೆಯುತ್ತಿರುವ ಸುದ್ದಿ ತಿಳಿದು ಸ್ವಾಮೀಜಿ ಮಠಕ್ಕೆ ವಾಪಸ್ ಆಗಿದ್ದಾರೆ. ಆದ್ರೆ, ಕುಡಿದು ಮಠದ ಆವರಣದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಈ ಮೂಲಕ ತಮ್ಮ ವಿರೋಧಿಗಳನ್ನ ಹೆದರಿಸಲು ಗುಂಡು ಹಾರಿಸಿದ್ರಾ ಎನ್ನುವ ಚರ್ಚೆಗಳು ನಡೆದಿದ್ದು, ಸದ್ಯ ಗುಂಡು ಹಾರಿಸಿರುವ ವಿಡಿಯೋ ವೈರಲ್ ಆಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published on: Dec 22, 2025 07:00 PM
Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More