‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ ಹೇಗಿತ್ತು ಗೊತ್ತ?

Updated on: May 02, 2025 | 10:08 PM

‘ಕಲಾಮಾಧ್ಯಮ’ ಯೂಟ್ಯೂಬ್ ಚಾನೆಲ್ ಬಗ್ಗೆ ಹೊಸದಾಗಿ ಹೇಳಬೇಕಾಗಿದ್ದಿಲ್ಲ. ಸೆಲೆಬ್ರಿಟಿಗಳ ಸಂದರ್ಶನದ ಮೂಲಕ ಈ ಯೂಟ್ಯೂಬ್​ ವಾಹಿನಿಯ ಪರಮೇಶ್ವರ್ ಅವರು ಜನಪ್ರಿಯತೆ ಪಡೆದಿದ್ದಾರೆ. ಅವರ ರಿಯಲ್ ಲೈಫ್ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಯಶಸ್ವಿ ಯೂಟ್ಯೂಬರ್ ಆಗಿರುವ ಪರಮೇಶ್ವರ್ ಅವರು ಬಹಳ ಕಷ್ಟದ ಹಾದಿ ಸವೆಸಿದ್ದಾರೆ. ಆ ಕುರಿತು ಅವರು ‘ಟಿವಿ9’ ವಿಶೇಷ ಸಂದರ್ಶನದಲ್ಲಿ ಮಾತನಾಡಿದ್ದಾರೆ.

‘ಕಲಾಮಾಧ್ಯಮ’ (Kalamadhyama) ಯೂಟ್ಯೂಬ್ ಕುರಿತು ಹೊಸದಾಗಿ ಹೇಳುವ ಅವಶ್ಯಕತೆ ಇಲ್ಲ. ಅಷ್ಟರಮಟ್ಟಿಗೆ ‘ಕಲಾಮಾಧ್ಯಮ’ ಫೇಮಸ್ ಆಗಿದೆ. ಈ ಯೂಟ್ಯೂಬ್​ ವಾಹಿನಿಯಲ್ಲಿ ಸೆಲೆಬ್ರಿಟಿಗಳ ಸಂದರ್ಶನ ಮಾಡುವ ಮೂಲಕ ಪರಮೇಶ್ವರ್ ಅವರು ಮನೆಮಾತಾಗಿದ್ದಾರೆ. ಅವರ ವೈಯಕ್ತಿಕ ಜೀವನದ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಯಶಸ್ವಿ ಯೂಟ್ಯೂಬರ್ ಆಗಿರುವ ಪರಮೇಶ್ವರ್ (Parameshwar) ಅವರು ಈ ಮೊದಲು ಕಷ್ಟದ ಹಾದಿ ಸವೆಸಿದ್ದಾರೆ. ಆ ವಿಷಯಗಳ ಬಗ್ಗೆ ಅವರು ಟಿವಿ9 ಸಂದರ್ಶನದಲ್ಲಿ ಮಾತಾಡಿದ್ದಾರೆ. ನಟ ಆಗಬೇಕು ಅಂತ ಕನಸು ಕಂಡಿದ್ದ ಅವರು ನಂತರ ಯೂಟ್ಯೂಬರ್ (Youtuber) ಆಗಿದ್ದು ಹೇಗೆ ಎಂಬುದನ್ನು ವಿವರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More