‘ಸೂಪರ್ ಆಗಿದೆ’: ಬೆಂಗಳೂರಿನಲ್ಲಿ ‘ಕಲ್ಕಿ 2898 ಎಡಿ’ ನೋಡಿ ಕನ್ನಡಿಗರು ಖುಷ್
‘ಕಲ್ಕಿ 2898 ಎಡಿ’ ಸಿನಿಮಾ ಇಂದು (ಜೂನ್ 27) ಬಹುತೇಕ ಕಡೆಗಳಲ್ಲಿ ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ. ಬೆಂಗಳೂರಿನಲ್ಲಿ ಸಿನಿಮಾ ನೋಡಿರುವ ಪ್ರಭಾಸ್ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಸಿನಿಮಾ ತುಂಬ ಚೆನ್ನಾಗಿದೆ ಎಂದು ಫಸ್ಟ್ ಡೇ ಫಸ್ಟ್ ಶೋ ನೋಡಿದ ಪ್ರೇಕ್ಷಕರು ಹೇಳಿದ್ದಾರೆ. ಬಿಗ್ ಬಜೆಟ್ನಲ್ಲಿ ಈ ಸಿನಿಮಾ ನಿರ್ಮಾಣ ಆಗಿದ್ದು, ವಿಶ್ವಾದ್ಯಂತ ತೆರೆಕಂಡಿದೆ.
ಟಾಲಿವುಡ್ ನಟ ಪ್ರಭಾಸ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಕಲ್ಕಿ 2898 ಎಡಿ’ (Kalki 2898 AD) ಇಂದು (ಜೂನ್ 27) ಬಿಡುಗಡೆ ಆಗಿದೆ. ಈ ಸಿನಿಮಾಗೆ ನಾಗ್ ಅಶ್ವಿನ್ (Nag Ashwin) ಅವರು ನಿರ್ದೇಶನ ಮಾಡಿದ್ದಾರೆ. ಈ ಮೊದಲು ‘ಮಹಾನಟಿ’ ಸಿನಿಮಾ ಮಾಡಿದ್ದ ನಾಗ್ ಅಶ್ವಿನ್ ಈಗ ಬೇರೆಯದೇ ಲೋಕವನ್ನು ಪ್ರೇಕ್ಷಕರಿಗೆ ತೋರಿಸಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ‘ಕಲ್ಕಿ 2898 ಎಡಿ’ ತೆರೆಕಂಡಿದೆ. ಬೆಂಗಳೂರಿನಲ್ಲೂ ಈ ಚಿತ್ರಕ್ಕೆ ಭರ್ಜರಿ ಓಪನಿಂಗ್ ಸಿಕ್ಕಿದೆ. ಪ್ರಭಾಸ್ ಅಭಿಮಾನಿಗಳು (Prabhas Fans) ಈ ಸಿನಿಮಾವನ್ನು ನೋಡಿ ಖುಷಿಪಟ್ಟಿದ್ದಾರೆ. ಸಿನಿಮಾ ನೋಡಿದ ಬಳಿಕ ಎಲ್ಲರೂ ಖುಷಿ ಖುಷಿಯಾಗಿ ಪ್ರತಿಕ್ರಿಯೆ ನೀಡಿದ್ದಾರೆ. ದೀಪಿಕಾ ಪಡುಕೋಣೆ, ಪ್ರಭಾಸ್, ದಿಶಾ ಪಟಾನಿ, ಅಮಿತಾಭ್ ಬಚ್ಚನ್, ಕಮಲ್ ಹಾಸನ್ ಮುಂತಾದವರು ‘ಕಲ್ಕಿ 2898 ಎಡಿ’ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ. ಮೊದಲ ದಿನ ಬಹುತೇಕ ಕಡೆಗಳಲ್ಲಿ ಈ ಸಿನಿಮಾ ಹೌಸ್ಫುಲ್ ಪ್ರದರ್ಶನ ಕಂಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.