ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಹಿಂದೂಗಳು ತಲ್ವಾರ್ ತೋರಿಸಿದ್ರೆ ಪಹಲ್ಗಾಮ್ ಕಥೆಯೇ ಬೇರೆಯಾಗ್ತಿತ್ತು ಎಂದ ಪ್ರಭಾಕರ ಭಟ್

Edited By:

Updated on: Apr 29, 2025 | 11:30 AM

ಕಲ್ಲಡ್ಕ ಪ್ರಭಾಕರ ಭಟ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಉಗ್ರ ದಾಳಿ ವಿಚಾರವಾಗಿ ಮಾತನಾಡಿದ ಆರ್​ಎಸ್​ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್, ಹಿಂದೂಗಳು ಕೇವಲ ತಲ್ವಾರ್ ತೋರಿಸಿದ್ದರೆ ಕಥೆಯೇ ಬೇರೆ ಇರುತ್ತಿತ್ತು ಎಂದಿದ್ದಾರೆ. ಹಿಂದೆಲ್ಲ ಹಿಂದೂಗಳು ದಾಳಿಯಾದಾಗ ಓಡಿ ಹೋಗುತ್ತಿದ್ದರು. ಆದರೆ, ಈಗ ಹಾಗಲ್ಲ. ತಿರುಗಿ ನಿಲ್ಲುತ್ತಿದ್ದಾರೆ, ನಿಲ್ಲಬೇಕು ಎಂದು ಅವರು ಕರೆ ನೀಡಿದರು.

ಮಂಗಳೂರು, ಏಪ್ರಿಲ್ 29: ಪಹಲ್ಗಾಮ್ ದಾಳಿ ವೇಳೆ ಉಗ್ರರಿಗೆ ಹಿಂದೂಗಳು ಕೇವಲ ತಲ್ವಾರ್ ತೋರಿಸಿದ್ದರೆ ಸಾಕಿತ್ತು, ಕಥೆಯೇ ಬೇರೆಯಾಗುತ್ತಿತ್ತು ಎಂದು ಆರ್​ಎಸ್​ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ವರ್ಕಾಡಿಯಲ್ಲಿ ಮಾತನಾಡಿದ ಅವರು, ಹೆಣ್ಣುಮಕ್ಕಳು ವ್ಯಾನಿಟಿ ಬ್ಯಾಗ್​​ನಲ್ಲಿ ಚೂರಿ ಇಟ್ಟುಕೊಳ್ಳಿ ಎಂದು ಕರೆ ನೀಡಿದರು. ಹೆಣ್ಣುಮಕ್ಕಳು ವ್ಯಾನಿಟಿ ಬ್ಯಾಗ್​​ನಲ್ಲಿ ಪೌಡರ್, ಬಾಚಣಿಗೆ ಜೊತೆಗೆ ಚಾಕು ಇಟ್ಟುಕೊಳ್ಳಿ. 6 ಇಂಚಿನ ಚೂರಿ ಇಟ್ಟುಕೊಳ್ಳಲು ಯಾವುದೇ ಲೈಸೆನ್ಸ್ ಬೇಡ. ಸಂಜೆ ಮೇಲೆ ಓಡಾಡಿದ್ರೆ ನಿಮ್ಮ ಮೇಲೆ ಖಂಡಿತಾ ಅಕ್ರಮಣ ಮಾಡುತ್ತಾರೆ. ಆಕ್ರಮಣ ಮಾಡಬೇಡಿ ಎಂದು ಬೇಡಿಕೊಂಡ್ರೆ ನಿಮ್ಮ ಕಥೆ ಮುಗಿಯಿತು. ಅದರ ಬದಲು ಚೂರಿ ತೋರಿಸಿ, ‘‘ಬಾ’’ ಎಂದು ಸವಾಲು ಹಾಕಿದರೆ ಸಾಕು ಹೆದರಿ ಓಡುತ್ತಾರೆ ಎಂದು ಅವರು ಹೇಳಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More