ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
Kamal Haasan: ‘ಥಗ್ ಲೈಫ್’ ಸಿನಿಮಾ ಬಿಡುಗಡೆ ಆದರೆ ಹಿಂಸಾತ್ಮಕ ಪ್ರತಿಭಟನೆ ಮಾಡುವುದಾಗಿ ಕನ್ನಡಪರ ಸಂಘಟನೆಗಳು ಎಚ್ಚರಿಕೆ ನೀಡಿವೆ. ಅದರ ಬೆನ್ನಲ್ಲೆ ಡಿಕೆ ಶಿವಕುಮಾರ್ ಮಾತನಾಡಿ, ಕಮಲ್ ಹಾಸನ್ ವಿಚಾರದಲ್ಲಿ ಯಾವುದೇ ಕಾರಣಕ್ಕೂ ಯಾರೂ ಸಹ ಕಾನೂನು ಕೈಗೆ ತೆಗೆದುಕೊಳ್ಳಬಾರದು, ಶಾಂತ ರೀತಿಯಿಂದಲೇ ವರ್ತಿಸಬೇಕು ಎಂದು ಮನವಿ ಮಾಡಿದ್ದಾರೆ.
ಕಮಲ್ ಹಾಸನ್ ಕನ್ನಡದ ಬಗ್ಗೆ ಆಡಿರುವ ಮಾತುಗಳು ವಿವಾದವಾಗಿದ್ದು, ಅವರ ವಿರುದ್ಧ ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶ ಹೊರಹಾಕಿವೆ. ಕಮಲ್ ನಟನೆಯ ‘ಥಗ್ ಲೈಫ್’ ಸಿನಿಮಾ ಬಿಡುಗಡೆ ಮಾಡಿದರೆ ಚಿತ್ರಮಂದಿರಗಳಿಗೆ ಬೆಂಕಿ ಇಡುವುದಾಗಿ ಎಚ್ಚರಿಕೆ ನೀಡಿವೆ. ವಾಟಾಳ್ ನಾಗರಾಜ್ ಮಾತನಾಡಿ, ಸಿನಿಮಾ ಬಿಡುಗಡೆ ಆದರೆ ರಾಜ್ಯ ರಣರಂಗ ಆಗುತ್ತದೆ ಎಂದಿದ್ದಾರೆ. ಕನ್ನಡಪರ ಸಂಘಟನೆಗಳು ಹಿಂಸಾತ್ಮಕ ಹೋರಾಟದ ಎಚ್ಚರಿಕೆ ನೀಡಿದ ಬೆನ್ನಲ್ಲೆ ಡಿಸಿಎಂ ಡಿಕೆ ಶಿವಕುಮಾರ್, ಕಮಲ್ ಹಾಸನ್ ವಿಚಾರದಲ್ಲಿ ಯಾರೂ ಕಾನೂನು ಕೈಗೆ ತೆಗೆದುಕೊಳ್ಳಬಾರದು, ಬೆಂಗಳೂರಿನಲ್ಲಿ ಎಲ್ಲ ಭಾಷಿಕರೂ ಇದ್ದಾರೆ. ಬೆಂಗಳೂರಿಗೂ ಹೊಸೂರಿಗೆ ಸಾಕಷ್ಟು ವ್ಯಾಪಾರಿಕ ನಂಟು ಇದೆ, ಹಾಗಾಗಿ ಎಚ್ಚರಿಕೆಯಿಂದ ಸಾಂವಿಧಾನಿಕ ರೀತಿಯ ಹೋರಾಟ ಮಾತ್ರವೇ ಮಾಡಬೇಕು ಎಂದಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos