ಮೈಸೂರು ದಸರಾ ಕ್ರೀಡಾಕೂಟದಲ್ಲಿ ಕಂಬಳ ಸ್ಪರ್ಧೆ: ಡಿಕೆ ಶಿವಕುಮಾರ್ ಘೋಷಣೆ
ಮುಂದಿನ ವರ್ಷದಿಂದಲೇ ಮೈಸೂರು ದಸರಾ ಕ್ರೀಡಾಕೂಟದಲ್ಲಿ ಕಂಬಳ ಸ್ಪರ್ಧೆಯನ್ನು ಸೇರ್ಪಡೆಗೊಳಿಸುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಘೋಷಿಸಿದ್ದಾರೆ. ಮಂಗಳೂರಿನ ಗುರುಪುರ ಕಂಬಳದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಮತ್ತು ಮೈಸೂರು ಜಿಲ್ಲಾ ಸಚಿವರೊಂದಿಗೆ ಮಾತುಕತೆ ನಡೆಸಿ, 3 ಎಕರೆ ಜಾಗದಲ್ಲಿ ಶಾಶ್ವತ ಕಂಬಳ ಕೆರೆಯನ್ನು ನಿರ್ಮಿಸುವ ಯೋಜನೆಯನ್ನು ರೂಪಿಸುವುದಾಗಿ ತಿಳಿಸಿದ್ದಾರೆ.
ಮಂಗಳೂರು, ಏಪ್ರಿಲ್ 13: ಮುಂದಿನ ವರ್ಷದಿಂದಲೇ ಮೈಸೂರು ದಸರಾ ಕ್ರೀಡಾಕೂಟದಲ್ಲಿ ಕಂಬಳ ಸ್ಪರ್ಧೆ ಆಯೋಜನೆ ಮಾಡುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಘೋಷಣೆ ಮಾಡಿದ್ದಾರೆ. ನಗರದ ಗುರುಪುರ ಕಂಬಳದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಸಿಎಂ, ಮೈಸೂರು ಜಿಲ್ಲಾ ಸಚಿವರ ಜೊತೆಗೆ ಮಾತುಕತೆ ನಡೆಸುತ್ತೇನೆ. ಇದಕ್ಕಾಗಿ ದಸರಾ ಕ್ರೀಡಾಕೂಟದಲ್ಲಿ ಪ್ರತಿವರ್ಷ ಕಂಬಳ ನಡೆಯಬೇಕು. 3 ಎಕರೆ ಜಾಗವನ್ನು ನಿಗದಿಪಡಿಸಿ ಶಾಶ್ವತ ಕಂಬಳ ಕೆರೆ ನಿರ್ಮಿಸಬೇಕು. ಇದಕ್ಕಾಗಿ ಅನುದಾನ ತೆಗೆದಿಡಲು ವ್ಯವಸ್ಥೆ ಮಾಡಿಸುತ್ತೇನೆ. ಕಂಬಳ ಅಂತಾರಾಷ್ಟ್ರೀಯ ಕ್ರೀಡೆಯಾಗಿ ಬೆಳೆಯಬೇಕು ಎಂದು ಹೇಳಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
