ಮೈಸೂರು ದಸರಾ ಕ್ರೀಡಾಕೂಟದಲ್ಲಿ ಕಂಬಳ ಸ್ಪರ್ಧೆ: ಡಿಕೆ ಶಿವಕುಮಾರ್ ಘೋಷಣೆ

Edited By:

Updated on: Apr 13, 2025 | 12:38 PM

ಮುಂದಿನ ವರ್ಷದಿಂದಲೇ ಮೈಸೂರು ದಸರಾ ಕ್ರೀಡಾಕೂಟದಲ್ಲಿ ಕಂಬಳ ಸ್ಪರ್ಧೆಯನ್ನು ಸೇರ್ಪಡೆಗೊಳಿಸುವುದಾಗಿ ಡಿಸಿಎಂ ಡಿಕೆ ಶಿವಕುಮಾರ್​ ಘೋಷಿಸಿದ್ದಾರೆ. ಮಂಗಳೂರಿನ ಗುರುಪುರ ಕಂಬಳದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಮತ್ತು ಮೈಸೂರು ಜಿಲ್ಲಾ ಸಚಿವರೊಂದಿಗೆ ಮಾತುಕತೆ ನಡೆಸಿ, 3 ಎಕರೆ ಜಾಗದಲ್ಲಿ ಶಾಶ್ವತ ಕಂಬಳ ಕೆರೆಯನ್ನು ನಿರ್ಮಿಸುವ ಯೋಜನೆಯನ್ನು ರೂಪಿಸುವುದಾಗಿ ತಿಳಿಸಿದ್ದಾರೆ.

ಮಂಗಳೂರು, ಏಪ್ರಿಲ್​ 13: ಮುಂದಿನ ವರ್ಷದಿಂದಲೇ ಮೈಸೂರು ದಸರಾ ಕ್ರೀಡಾಕೂಟದಲ್ಲಿ ಕಂಬಳ ಸ್ಪರ್ಧೆ ಆಯೋಜನೆ ಮಾಡುವುದಾಗಿ ಡಿಸಿಎಂ ಡಿಕೆ ಶಿವಕುಮಾರ್​ (DK Shivakumar) ಘೋಷಣೆ ಮಾಡಿದ್ದಾರೆ. ನಗರದ ಗುರುಪುರ ಕಂಬಳದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಸಿಎಂ, ಮೈಸೂರು ಜಿಲ್ಲಾ ಸಚಿವರ ಜೊತೆಗೆ ಮಾತುಕತೆ ನಡೆಸುತ್ತೇನೆ. ಇದಕ್ಕಾಗಿ ದಸರಾ ಕ್ರೀಡಾಕೂಟದಲ್ಲಿ ಪ್ರತಿವರ್ಷ ಕಂಬಳ ನಡೆಯಬೇಕು. 3 ಎಕರೆ ಜಾಗವನ್ನು ನಿಗದಿಪಡಿಸಿ ಶಾಶ್ವತ ಕಂಬಳ ಕೆರೆ ನಿರ್ಮಿಸಬೇಕು. ಇದಕ್ಕಾಗಿ ಅನುದಾನ ತೆಗೆದಿಡಲು ವ್ಯವಸ್ಥೆ ಮಾಡಿಸುತ್ತೇನೆ. ಕಂಬಳ ಅಂತಾರಾಷ್ಟ್ರೀಯ ಕ್ರೀಡೆಯಾಗಿ ಬೆಳೆಯಬೇಕು ಎಂದು ಹೇಳಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More