ಮೈಸೂರು ದಸರಾ 2026: ಇಂದಿನಿಂದ 2 ದಿನ ಕರಾವಳಿ ಕಂಬಳ ; ಸುಪ್ರೀಂ ಕೋರ್ಟ್ ನ ಮಾರ್ಗಸೂಚಿ ಪಾಲನೆ ಕಡ್ಡಾಯ

Edited By:

Updated on: Oct 18, 2026 | 11:46 AM

ಈ ಬಾರಿಯ ಮೈಸೂರು ದಸರಾ 2026ರಲ್ಲಿ ಕರಾವಳಿ ಕಂಬಳ ಆಯೋಜಿಸಲಾಗಿದೆ. ಇದು ದಸರಾದಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ಕಂಬಳವಾಗಿದ್ದು, ಇಂದಿನಿಂದ ಎರಡು ದಿನಗಳ ಕಾಲ ಜರುಗಲಿದೆ. ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ, ಪ್ರಾಣಿಗಳಿಗೆ ಯಾವುದೇ ಹಿಂಸೆ ಆಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕಂಬಳ ಆಯೋಜನೆ ಕುರಿತು ಪ್ರಶ್ನೆಗಳೆದ್ದಿವೆ.

ಮೈಸೂರು, ಅಕ್ಟೋಬರ್ 18: ಮೈಸೂರು ದಸರಾ 2026ರ ವಿಶೇಷ ಆಕರ್ಷಣೆಯಾಗಿ ಕರಾವಳಿಯ ಕಂಬಳಕ್ಕೆ ಚಾಲನೆ ಸಿಗುತ್ತಿದೆ. ಇಂದಿನಿಂದ ಎರಡು ದಿನಗಳ ಕಾಲ ನಡೆಯಲಿರುವ ಈ ಕಂಬಳ, ಮೈಸೂರು ದಸರಾ ಇತಿಹಾಸದಲ್ಲಿ ಮೊದಲ ಬಾರಿಗೆ ಆಯೋಜನೆಯಾಗುತ್ತಿದೆ. ಈ ಕಾರ್ಯಕ್ರಮವು ಸುಪ್ರೀಂ ಕೋರ್ಟ್‌ನ ಕಟ್ಟುನಿಟ್ಟಾದ ಮಾರ್ಗಸೂಚಿಗಳನ್ನು ಪಾಲಿಸುವುದು ಕಡ್ಡಾಯವಾಗಿದೆ. ಪ್ರಾಣಿಗಳಿಗೆ ಯಾವುದೇ ರೀತಿಯ ಹಿಂಸೆ, ನೋವು ಅಥವಾ ಚಾಟಿ ಏಟು ನೀಡದಂತೆ ಕಂಬಳವನ್ನು ನಡೆಸಬೇಕಿದೆ.

ಪ್ರಾಣಿಗಳ ಕಲ್ಯಾಣವನ್ನು ಖಚಿತಪಡಿಸಿಕೊಳ್ಳುವುದು ಜಿಲ್ಲಾಧಿಕಾರಿಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಕಂಬಳ ನಡೆಯುವ ಸ್ಥಳಗಳ ಪರಿಶೀಲನೆಗೆ ಪ್ರಾಣಿ ಕಲ್ಯಾಣ ಮಂಡಳಿ ಅಧಿಕಾರಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ, ಕಂಬಳ ಆಯೋಜನೆಗೆ ಏಳು ದಿನಗಳ ಮುಂಚಿತವಾಗಿ ಅಧಿಸೂಚನೆ ಸಲ್ಲಿಸುವಂತೆ ಸೂಚಿಸಲಾಗಿದೆ. ಈ ನಿರ್ದೇಶನಗಳನ್ನು ಸಂಪೂರ್ಣವಾಗಿ ಪಾಲಿಸಲಾಗಿದೆಯೇ ಎಂಬ ಬಗ್ಗೆ ಸದ್ಯ ಅನುಮಾನಗಳು ವ್ಯಕ್ತವಾಗಿವೆ.

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಮಾಡುವ ನಿರ್ಧಾರದ ಬಗ್ಗೆ ಈ ಹಿಂದೆ ಹಲವು ಆಕ್ಷೇಪಗಳು ಕೂಡ ಎದ್ದಿದ್ದವು. ಮೈಸೂರು ದಸರಾದಲ್ಲಿ ಕಂಬಳದ ಅಗತ್ಯವಿದೆಯೇ ಎಂಬ ಪ್ರಶ್ನೆಗಳೂ ಎದುರಾಗಿದ್ದವು. ಸ್ನೇಹಮಯಿ ಕೃಷ್ಣ ಅವರು ಈ ಬಗ್ಗೆ ಸ್ಪಷ್ಟನೆ ಕೋರಿ ಡಿವೈಎಸ್ಪಿಗೆ ಪತ್ರ ಬರೆದಿದ್ದಾರೆ. ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳ ಅನುಸಾರ, ಪ್ರಾಣಿ ಹಿಂಸೆಯಾಗದಂತೆ ಕಂಬಳವನ್ನು ಆಯೋಜಿಸಲಾಗಿದೆಯೇ ಎಂಬುದು ಪ್ರಮುಖ ಪ್ರಶ್ನೆಯಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More