‘ದಸರಾದಲ್ಲಿ ಕಂಬಳ ಆಯೋಜಿಸುವುದು ಬೇಡ’ ಎಂದ ಪ್ರಮೋದಾದೇವಿ ಒಡೆಯರ್

Edited By:

Updated on: Sep 21, 2026 | 9:15 PM

ಮೈಸೂರು ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ದಸರಾ ಸಂದರ್ಭದಲ್ಲಿ ಕಂಬಳ ಆಯೋಜಿಸುವ ನಿರ್ಧಾರವನ್ನು ವಿರೋಧಿಸಿದ್ದಾರೆ. ದಸರಾದಲ್ಲಿ ಆಯೋಜಿಸಿದರೆ ಕಂಬಳಕ್ಕೆ ಪ್ರಾಮುಖ್ಯತೆ ಸಿಗುವುದಿಲ್ಲ, ತನ್ನದೇ ಆದ ವೈಶಿಷ್ಟ್ಯವಿರುವ ಕಂಬಳವನ್ನು ಪ್ರತ್ಯೇಕವಾಗಿ ಆಯೋಜಿಸಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತು ಸರ್ಕಾರ ತಮ್ಮ ಸಲಹೆ ಕೇಳಿಲ್ಲ ಎಂದೂ ತಿಳಿಸಿದ್ದಾರೆ.

ಮೈಸೂರು, ಸೆಪ್ಟೆಂಬರ್​ 21: ‘ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜಿಸುವುದು ಬೇಡ’ ಎಂದು ರಾಜಮಾತೆ ಪ್ರಮೋದಾದೇವಿ ಒಡೆಯರ್​ ಹೇಳಿದ್ದಾರೆ. ಖಾಸಗಿ ದರ್ಬಾರ್ ಬಗ್ಗೆ ಮಾಹಿತಿ ನೀಡಿ ಮಾತನಾಡಿದ ಅವರು, ‘ಮಂಗಳೂರು ಭಾಗದ ಕಂಬಳಕ್ಕೆ ತನ್ನದೇ ಆದ ವೈಶಿಷ್ಟ್ಯ ಹಾಗೂ ಪ್ರಾಮುಖ್ಯತೆ ಇದ್ದು, ಅದನ್ನು ಕಾಪಾಡಬೇಕಿದೆ. ದಸರಾದಲ್ಲಿ ಕಂಬಳ ಆಯೋಜಿಸಿದರೆ ಅದಕ್ಕೆ ಸೂಕ್ತ ಪ್ರಾಮುಖ್ಯತೆ ಸಿಗುವುದಿಲ್ಲ, ಬದಲಾಗಿ ದಸರಾ ಮುಗಿದ ನಂತರ ಪ್ರತ್ಯೇಕವಾಗಿ ಕಂಬಳವನ್ನು ಆಯೋಜಿಸಬಹುದಿತ್ತು. ದಸರಾದಲ್ಲಿ ಕಂಬಳ ಆಯೋಜಿಸುವ ಕುರಿತು ಸರ್ಕಾರ ನಮ್ಮ ಅಭಿಪ್ರಾಯ ಕೇಳಿಲ್ಲ’ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More