ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ

Edited By:

Updated on: Jun 23, 2026 | 9:06 AM

Sri Mummadi Nirvana Swamiji Passes Away; ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮೀಜಿಗಳು 84ನೇ ವಯಸ್ಸಿನಲ್ಲಿ ಲಿಂಗೈಕ್ಯರಾಗಿದ್ದಾರೆ. ಹಲವು ಸತ್ಕಾರ್ಯಗಳ ಮೂಲಕ ಸಮಾಜಕ್ಕೆ ಸೇವೆ ಸಲ್ಲಿಸಿದ್ದ ಶ್ರೀಗಳ ಅಂತಿಮ ದರ್ಶನವನ್ನು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ಬೆಳಗ್ಗೆ 10 ಗಂಟೆಗೆ ದೇಗುಲ ಮಠಕ್ಕೆ ಭೇಟಿ ನೀಡಿ ಪಡೆಯಲಿದ್ದಾರೆ.

ರಾಮನಗರ, ಜೂನ್ 23: ಕನಕಪುರ ದೇಗುಲ ಮಠದ ಹಿರಿಯ ಶ್ರೀಗಳಾದ ಮುಮ್ಮಡಿ ನಿರ್ವಾಣ ಮಹಾಸ್ವಾಮೀಜಿಗಳು 84ನೇ ವಯಸ್ಸಿನಲ್ಲಿ ಲಿಂಗೈಕ್ಯರಾಗಿದ್ದಾರೆ. ಹಲವು ದಶಕಗಳ ಕಾಲ ಸಮಾಜಕ್ಕೆ ಸತ್ಕಾರ್ಯಗಳ ಮೂಲಕ ಸೇವೆ ಸಲ್ಲಿಸಿ ಜನಾನುರಾಗಿಗಳಾಗಿದ್ದ ಶ್ರೀಗಳ ನಿಧನಕ್ಕೆ ಭಕ್ತ ಸಮೂಹ ಕಂಬನಿ ಮಿಡಿದಿದೆ. ಶ್ರೀಗಳ ಅಂತಿಮ ದರ್ಶನ ಪಡೆಯಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕನಕಪುರ ದೇಗುಲ ಮಠಕ್ಕೆ ಇಂದು ಬೆಳಗ್ಗೆ 10 ಗಂಟೆಗೆ ಭೇಟಿ ನೀಡಲಿದ್ದಾರೆ. ಮೃತರ ಪಾರ್ಥಿವ ಶರೀರಕ್ಕೆ ಗೌರವ ನಮನ ಸಲ್ಲಿಸಿ, ಅಂತಿಮ ದರ್ಶನ ಪಡೆಯಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಪ್ರಶಾಂತ್​ ಬಿ.

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More