ಭದ್ರತಾ ಸಿಬ್ಬಂದಿಯಿಂದ ಕಂಗನಾ ಕೆನ್ನೆಗೆ ಏಟು; ನಟಿಯ ಮೊದಲ ಪ್ರತಿಕ್ರಿಯೆ ಇಲ್ಲಿದೆ..
ಚಂಡಿಗಢ ವಿಮಾನ ನಿಲ್ದಾಣದಲ್ಲಿ ನಟಿ, ಸಂಸದೆ ಕಂಗನಾ ರಣಾವತ್ ಅವರ ಕೆನ್ನೆಗೆ ಮಹಿಳಾ ಭದ್ರತಾ ಸಿಬ್ಬಂದಿ ಹೊಡೆದಿದ್ದಾರೆ. ಈ ಘಟನೆಯ ಬಳಿಕ ಕಂಗನಾ ಅವರು ಈ ವಿಡಿಯೋ ಮೂಲಕ ವಿವರ ನೀಡಿದ್ದಾರೆ. ಸಿಐಎಸ್ಎಫ್ ಭದ್ರತಾ ಸಿಬ್ಬಂದಿ ತಮಗೆ ಹೊಡೆದಿದ್ದಕ್ಕೆ ಕಾರಣ ಏನು ಎಂಬುದನ್ನು ಕಂಗನಾ ಅವರು ವಿವರಿಸಿದ್ದಾರೆ. ಆ ವಿಡಿಯೋ ಇಲ್ಲಿದೆ ನೋಡಿ..
ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಸಂಸದೆಯಾಗಿ ಆಯ್ಕೆ ಆಗಿರುವ ನಟಿ ಕಂಗನಾ ರಣಾವತ್ (Kangana Ranaut) ಅವರ ಮೇಲೆ ಭದ್ರತಾ ಸಿಬ್ಬಂದಿ ಕೈ ಮಾಡಿದ್ದಾರೆ. ಚಂಡಿಗಢ ವಿಮಾನ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕುಲ್ವಿಂದರ್ ಕೌರ್ ಎಂಬ ಮಹಿಳಾ ಕಾನ್ಸ್ಟೇಬಲ್ ಈ ಕೃತ್ಯ ಎಸಗಿದ್ದಾರೆ. ಕಂಗನಾ ರಣಾವತ್ಗೆ ಕಪಾಳ ಮೋಕ್ಷ ಮಾಡಿರುವ ಘಟನೆಯಿಂದ ಎಲ್ಲರಿಗೂ ಶಾಕ್ ಆಗಿದೆ. ಈ ಬಗ್ಗೆ ಕಂಗನಾ ಅವರು ವಿಡಿಯೋ (Kangana Ranaut Video) ಮೂಲಕ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ‘ನಮಸ್ತೆ ಸ್ನೇಹಿತರೇ.. ನನ್ನ ಹಿತೈಷಿಗಳು ಮತ್ತು ಮಾಧ್ಯಮದವರಿಂದ ಅನೇಕ ಫೋನ್ ಕರೆಗಳು ಬರುತ್ತಿವೆ. ನಾನು ಸುರಕ್ಷಿತವಾಗಿದ್ದೇನೆ. ಚಂಡಿಗಢ ವಿಮಾನ ನಿಲ್ದಾಣದಲ್ಲಿ ಸೆಕ್ಯುರಿಟಿ ಚೆಕ್ ವೇಳೆ ಈ ಘಟನೆ ನಡೆಯಿತು. ನಾನು ಸೆಕ್ಯುರಿಟಿ ಚೆಕ್ ಮುಗಿಸಿ ಮುಂದೆ ತೆರಳುವಾಗಿ ಪಕ್ಕದ ಕ್ಯಾಬಿನ್ನಲ್ಲಿ ಇದ್ದ ಸಿಐಎಸ್ಎಫ್ (CISF) ಭದ್ರತಾ ಸಿಬ್ಬಂದಿ ಬಂದು ನನ್ನ ಮುಖಕ್ಕೆ ಹೊಡೆದರು. ಅಲ್ಲದೇ ನನಗೆ ಬೈಯ್ಯಲು ಶುರು ಮಾಡಿದರು. ಯಾಕೆ ಹೀಗೆ ಮಾಡಿದ್ರಿ ಅಂತ ನಾನು ಅವರಿಗೆ ಕೇಳಿದೆ. ರೈತರ ಹೋರಾಟಕ್ಕೆ ತಾವು ಬೆಂಬಲ ನೀಡುವುದಾಗಿ ಅವರು ಹೇಳಿದರು. ನಾನು ಸುರಕ್ಷಿತವಾಗಿದ್ದೇನೆ. ಆದರೆ ಪಂಜಾಬ್ನಲ್ಲಿ ಹೆಚ್ಚುತ್ತಿರುವ ಉಗ್ರವಾದ ಮತ್ತು ಆತಂಕವಾದವನ್ನು ನಾವು ಹೇಗೆ ನಿಭಾಯಿಸುವುದು ಎಂಬ ಬಗ್ಗೆ ನನ್ನ ಕಳಕಳಿ ಇರುವುದು. ಧನ್ಯವಾದ’ ಎಂದು ಕಂಗನಾ ರಣಾವತ್ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.