ಮೊದಲ ಪ್ರಯತ್ನದಲ್ಲೇ ಗೆಲುವು, ಕಂಗನಾ ರನೌತ್ ಹೇಳಿದ್ದು ಹೀಗೆ

|

Updated on: Jun 04, 2024 | 7:52 PM

ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಕಂಗನಾ ರನೌತ್ ಮೊದಲ ಪ್ರಯತ್ನದಲ್ಲಿಯೇ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಅವರು ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದರು. ತಮ್ಮ ಗೆಲುವಿನ ಬಗ್ಗೆ ನಟಿ ಮಾತನಾಡಿದ್ದಾರೆ.

ಬಾಲಿವುಡ್ ನಟಿ ಕಂಗನಾ ರನೌತ್ (Kangana Ranaut) ಲೋಕಸಭೆ ಚುನಾವಣೆಯಲ್ಲಿ ಗೆಲುವು ಕಂಡಿದ್ದಾರೆ. ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅವರು ಸ್ಪರ್ಧಿಸಿದ್ದರು. ಇದು ಅವರಿಗೆ ಮೊದಲ ಗೆಲುವು. ಅವರ ಚುನಾವಣಾ ಪ್ರಚಾರ ಸಖತ್ ಟ್ರೋಲ್​ಗೆ ಗುರಿಯಾಗಿತ್ತು. ಏನೇ ಆದರೂ ಕಂಗನಾ ಮೊದಲ ಪ್ರಯತ್ನದಲ್ಲಿಯೇ ಗೆಲುವು ಕಂಡಿದ್ದಾರೆ. ಚುನಾವಣೆ ಗೆದ್ದಿರುವ ಕಂಗನಾ ರನೌತ್, ಈ ಗೆಲುವನ್ನು ಪ್ರಧಾನಿ ನರೇಂದ್ರ ಮೋದಿಗೆ ಅರ್ಪಿಸಿದ್ದಾರೆ. ಮೊದಲ ಚುನಾವಣೆಯಲ್ಲಿಯೇ ಗೆಲುವಿಗೆ ಕಾರಣರಾದವರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ. ಅವರ ಹೇಳಿಕೆ ಇಲ್ಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published On - 7:51 pm, Tue, 4 June 24

Follow us on