ಹಳೆ ಕೇಸ್​​ನಲ್ಲಿ ವಾಟಾಳ್ ನಾಗರಾಜ್ ಅರೆಸ್ಟ್, ಆಟೋದಲ್ಲಿ ಕೋರ್ಟ್​​ಗೆ ಕರೆದೊಯ್ದ ಪೊಲೀಸ್ರು

Edited By:

Updated on: Apr 08, 2026 | 5:59 PM

ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ವಿರುದ್ಧ 42ನೇ ಎಸಿಎಂಎಂ ನ್ಯಾಯಾಲಯ ಅರೆಸ್ಟ್ ವಾರಂಟ್ ಹೊರಡಿಸಿದ ಹಿನ್ನೆಲೆ, ಬಸವೇಶ್ವರನಗರ ಪೊಲೀಸರು ಅವರನ್ನು ಬಂಧಿಸಿ ಆಟೋದಲ್ಲಿ ಕೋರ್ಟ್​​ಗೆ ಕರೆದುಕೊಂಡು ಹೋಗಿದ್ದಾರೆ. 2021ರಲ್ಲಿ ಕೊರೊನಾ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ರದ್ದುಪಡಿಸಿ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕೆಂದು ಆಗಿನ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ನಿವಾಸದ ಮುಂದೆ ವಾಟಳ್ ನಾಗರಾಜ್ ಪ್ರತಿಭಟನೆ ನಡೆಸಿದ್ದರು, ಈ ಸಂಬಂಧ ದೂರು ದಾಖಲಾಗಿತ್ತು. ಆದ್ರೆ,ಈ ಪ್ರಕರಣದಲ್ಲಿ ಅವರು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಇರುವುದರಿಂದ ಅರೆಸ್ಟ್ ವಾರಂಟ್ ಜಾರಿ ಮಾಡಿದ್ದು, ಅದರಂತೆ ಪೊಲೀಸರು ವಾಟಾಳ್ ನಾಗರಾಜ್ ಅವರನ್ನು ಬಂಧಿಸಿದ್ದಾರೆ.

ಬೆಂಗಳೂರು, (ಏಪ್ರಿಲ್ 08): ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ (Kannada Activist Vatal Nagaraj )  ಅವರನ್ನು ಬೆಂಗಳೂರಿನ ಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ.  42ನೇ ಎಸಿಎಂಎಂ ನ್ಯಾಯಾಲಯ ಅರೆಸ್ಟ್ ವಾರಂಟ್ ಹೊರಡಿಸಿದ ಹಿನ್ನೆಲೆಯಲ್ಲಿ ಇಂದು (ಏಪ್ರಿಲ್ 08) ವಾಟಾಳ್ ನಾಗರಾಜ್ ಅವರನ್ನ ಬಂಧಿಸಿ ಆಟೋದಲ್ಲಿ ಕೋರ್ಟ್​​ಗೆ ಕರೆದುಕೊಂಡು ಹೋಗಿದ್ದಾರೆ. 2021ರಲ್ಲಿ ಕೊರೊನಾ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ರದ್ದುಪಡಿಸಿ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕೆಂದು ಆಗಿನ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ನಿವಾಸದ ಮುಂದೆ ವಾಟಳ್ ನಾಗರಾಜ್ ಪ್ರತಿಭಟನೆ ನಡೆಸಿದ್ದರು, ಈ ಸಂಬಂಧ ದೂರು ದಾಖಲಾಗಿತ್ತು. ಆದ್ರೆ,ಈ ಪ್ರಕರಣದಲ್ಲಿ ಅವರು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಇರುವುದರಿಂದ ಅರೆಸ್ಟ್ ವಾರಂಟ್ ಜಾರಿ ಮಾಡಿದ್ದು, ಅದರಂತೆ ಪೊಲೀಸರು ವಾಟಾಳ್ ನಾಗರಾಜ್ ಅವರನ್ನು ಬಂಧಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More