ನಮ್ಮ ಮೆಟ್ರೋ : ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್

Updated on: Feb 09, 2026 | 8:32 PM

ಮೆಟ್ರೋ ದರ ಏರಿಕೆ ಹಿನ್ನಲೆ ಇಂದು (ಫೆಬ್​ರವರಿ 09) ಬೆಂಗಳೂರಿನ ಡಾ. ಬಿಆರ್ ಅಂಬೇಡ್ಕರ್ ಮೆಟ್ರೋ ನಿಲ್ದಾಣದಲ್ಲಿ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆಯನ್ನ ಹಮ್ಮಿಕೊಳ್ಳಲಾಗಿತ್ತು. ಮೆಟ್ರೋ ದರ ಏರಿಕೆ ಮಾಡಿ ಪ್ರಾಯಾಣಿಕರ ಹೊರೆಯನ್ನ ಹೆಚ್ಚು ಮಾಡಿ ಕನ್ನಡಿಗರನ್ನ ಕೆರಳುವಂತೆ ಮಾಡಿದೆ. ಈ ಕೂಡಲೇ ಮೆಟ್ರೋ ದರ ಏರಿಕೆಯನ್ನು ಹಿಂಪಡೆಯಬೇಕು,ಕನ್ನಡ ನಾಮಫಲಕವನ್ನು ಕಡ್ಡಾಯವಾಗಿ ಬಳಕೆ ಮಾಡಬೇಕು. ಇಲ್ಲವಾದರೆ ನಾವು ಬೀದಿಗೆ ಇಳಿಯುತ್ತೇವೆ. ಮಾರ್ಚ್ 7ರವರೆಗೆ ನಿಮ್ಗೆ ಅವಾಕಶ ಕೊಡುತ್ತೇವೆ. ಒಪ್ಪದೆ ಹೋದ್ರೆ ಅವತ್ತು ಇಡೀ ಬೆಂಗಳೂರಲ್ಲಿ ಸಂಪೂರ್ಣವಾಗಿ ಮೆಟ್ರೋ ನಿಲ್ಲಿಸುತ್ತೇವೆ. ಜೊತೆಗೆ ಸಾರ್ವಜನಿಕರಿಗೂ ಕೂಡ ಮೆಟ್ರೋ ಹತ್ತೋಕೆ ಬಿಡಲ್ಲ ಎಂದು ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು, (ಫೆಬ್ರವರಿ 09): ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಬಗ್ಗೆ ಇಂದು (ಫೆಬ್​ರವರಿ 09) ಬೆಂಗಳೂರಿನ ಡಾ. ಬಿಆರ್ ಅಂಬೇಡ್ಕರ್ ಮೆಟ್ರೋ ನಿಲ್ದಾಣದಲ್ಲಿ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆಯನ್ನ ಹಮ್ಮಿಕೊಳ್ಳಲಾಗಿತ್ತು. ಮೆಟ್ರೋ ದರ ಏರಿಕೆ ಮಾಡಿ ಪ್ರಾಯಾಣಿಕರ ಹೊರೆಯನ್ನ ಹೆಚ್ಚು ಮಾಡಿ ಕನ್ನಡಿಗರನ್ನ ಕೆರಳುವಂತೆ ಮಾಡಿದೆ. ಈ ಕೂಡಲೇ ಮೆಟ್ರೋ ದರ ಏರಿಕೆಯನ್ನು ಹಿಂಪಡೆಯಬೇಕು,ಕನ್ನಡ ನಾಮಫಲಕವನ್ನು ಕಡ್ಡಾಯವಾಗಿ ಬಳಕೆ ಮಾಡಬೇಕು. ಇಲ್ಲವಾದರೆ ನಾವು ಬೀದಿಗೆ ಇಳಿಯುತ್ತೇವೆ. ಮಾರ್ಚ್ 7ರವರೆಗೆ ನಿಮ್ಗೆ ಅವಾಕಶ ಕೊಡುತ್ತೇವೆ. ಒಪ್ಪದೆ ಹೋದ್ರೆ ಅವತ್ತು ಇಡೀ ಬೆಂಗಳೂರಲ್ಲಿ ಸಂಪೂರ್ಣವಾಗಿ ಮೆಟ್ರೋ ನಿಲ್ಲಿಸುತ್ತೇವೆ. ಜೊತೆಗೆ ಸಾರ್ವಜನಿಕರಿಗೂ ಕೂಡ ಮೆಟ್ರೋ ಹತ್ತೋಕೆ ಬಿಡಲ್ಲ ಎಂದು ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 09, 2026 08:31 PM
Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More