ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ

Updated on: Apr 18, 2025 | 8:03 PM

ಸ್ಯಾಂಡಲ್​​ವುಡ್ ನಟ ಅಜಯ್ ರಾವ್ ಅನೇಕ ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಸಿನಿಮಾ ಹೀರೋ ಆಗಿ ಮಿಂಚಿದ್ದಾರೆ. ಅಲ್ಲದೇ ನಿರ್ಮಾಪಕನಾಗಿಯೂ ಅವರು ಗೆಲುವು ಕಂಡಿದ್ದಾರೆ. ಇಷ್ಟೆಲ್ಲ ಸಾಧನೆ ಮಾಡಿದ ಅಜಯ್ ರಾವ್ ಶಿಕ್ಷಣ ಪಡೆದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ! ಇದು ಅಚ್ಚರಿಯ ವಿಷಯ.

ಖ್ಯಾತ ನಟ ಅಜಯ್ ರಾವ್ (Ajay Rao) ಅವರು ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಹೀರೋ ಆಗಿ ಅವರು ಮಿಂಚಿದ್ದಾರೆ. ಅಲ್ಲದೇ ನಿರ್ಮಾಪಕನಾಗಿ ಕೂಡ ಯಶಸ್ಸು ಕಂಡಿದ್ದಾರೆ. ಇಷ್ಟೆಲ್ಲ ಸಾಧನೆ ಮಾಡಿರುವ ಅಜಯ್ ರಾವ್ ಅವರು ಓದಿದ್ದು ಕೇವಲ ಎಸ್​ಎಸ್​ಎಲ್​ಸಿ (SSLC) ತನಕ ಮಾತ್ರ ಎಂಬುದು ಅಚ್ಚರಿಯ ವಿಷಯ. ಈ ಬಗ್ಗೆ ಅವರೇ ಹೇಳಿಕೊಂಡಿದ್ದಾರೆ. ‘ನನ್ನ ಬಳಿ ಇರುವುದು ಎಸ್​ಎಸ್​ಎಲ್​ಸಿ ಪ್ರಮಾಣಪತ್ರ ಮಾತ್ರ’ ಎಂದು ಅವರು ಹೇಳಿದ್ದಾರೆ. ‘ಯುದ್ಧಕಾಂಡ’ (Yuddhakaanda Movie) ಸಿನಿಮಾವನ್ನು ಅವರು ನಿರ್ಮಿಸಿದ್ದಾರೆ. ಜೊತೆಗೆ ಮುಖ್ಯಭೂಮಿಕೆಯಲ್ಲೂ ನಟಿಸಿದ್ದಾರೆ. ಈ ಸಿನಿಮಾ ಇಂದು (ಏಪ್ರಿಲ್ 18) ಬಿಡುಗಡೆ ಆಗಿದೆ. ‘ಟಿವಿ9’ ವಿಶೇಷ ಸಂದರ್ಶನದಲ್ಲಿ ಅಜಯ್ ರಾವ್ ಅವರು ಮಾತನಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More