AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ಕುಮಾರ್ ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್

ರಾಜ್​ಕುಮಾರ್ ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್

ಮದನ್​ ಕುಮಾರ್​
|

Updated on: Apr 26, 2026 | 3:22 PM

Share

ಡಾ. ರಾಜ್​ಕುಮಾರ್ ಸಮಾಧಿ ವಿಚಾರಕ್ಕೆ ಸಂಬಂಧಿಸಿದಂತೆ ನಟ ಚೇತನ್ ಕುಮಾರ್ ಅಹಿಂಸಾ ಅವರು ನೀಡಿದ ಹೇಳಿಕೆಯಿಂದ ವಿವಾದ ಭುಗಿಲೆದ್ದಿದೆ. ಚೇತನ್ ವಿರುದ್ಧ ರಾಜ್​ಕುಮಾರ್ ಅಭಿಮಾನಿಗಳು ಗರಂ ಆಗಿದ್ದಾರೆ. ಆದರೆ ಜೀವ ಬೆದರಿಕೆ ಹಾಕುವ ಅಧಿಕಾರ ಯಾರಿಗೂ ಇಲ್ಲ ಎಂದು ಚೇತನ್ ಅವರು ಹೇಳಿದ್ದಾರೆ.

ಡಾ. ರಾಜ್​ಕುಮಾರ್ (Dr Rajkumar) ಸಮಾಧಿ ವಿಚಾರಕ್ಕೆ ಸಂಬಂಧಿಸಿದಂತೆ ನಟ ಚೇತನ್ ಕುಮಾರ್ ಅಹಿಂಸಾ ಅವರು ನೀಡಿದ ಹೇಳಿಕೆಯಿಂದ ವಿವಾದ ಭುಗಿಲೆದ್ದಿದೆ. ಚೇತನ್ ವಿರುದ್ಧ ರಾಜ್​ಕುಮಾರ್ ಅಭಿಮಾನಿಗಳು ಗರಂ ಆಗಿದ್ದಾರೆ. ಆದರೆ ಜೀವ ಬೆದರಿಕೆ ಹಾಕುವ ಅಧಿಕಾರ ಯಾರಿಗೂ ಇಲ್ಲ ಎಂದು ಚೇತನ್ (Chetan Kumar Ahimsa) ಅವರು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ನಾನು ಕೂಡ ಚಿಕ್ಕ ವಯಸ್ಸಿನಿಂದ ಡಾ. ರಾಜ್​ಕುಮಾರ್ ಅವರ ಅಭಿಮಾನಿ. ಆದರೆ ಇಂದು ಅಭಿಮಾನಿ ಸಂಘದ ಪಟ್ಟಿ ಕಟ್ಟಿಕೊಂಡು ದಬ್ಬಾಳಿಕೆ ಮಾಡುತ್ತಿರುವವರನ್ನು ನಾವು ಸಹಿಸೋಕೆ ಆಗಲ್ಲ. ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ. ನಾವೆಲ್ಲರೂ ಕಾನೂನಿನ ಅಡಿಯಲ್ಲಿ ಇದ್ದೇವೆ. ರಾಜ್​ಕುಮಾರ್ ಕೂಡ 20ನೇ ಶತಮಾನದ ದೊಡ್ಡ ಸೂಪರ್ ಸ್ಟಾರ್ ಆಗಿದ್ದರೂ ಕೂಡ ಅವರು ಕಾನೂನಿನ ಅಡಿಯಲ್ಲಿ ಬಹಳ ಸರಳವಾಗಿ ಬದುಕಿದ್ದಾರೆ. ಅವರ ರೀತಿಯೇ ನಾವು ಬದುಕಬೇಕು’ ಎಂದು ಚೇತನ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More