ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ನಟ ಚಿಕ್ಕಣ್ಣ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದು, ಈಗಾಗಲೇ ಮದುವೆ ಶಾಸ್ತ್ರಗಳು ಶುರುವಾಗಿವೆ. ಪಾವನಾ ಅವರನ್ನು ಚಿಕ್ಕಣ್ಣ ಕೈ ಹಿಡಿಯುತ್ತಿದ್ದಾರೆ. ಆ.29ರಂದು ಆರತಕ್ಷತೆ ಕಾರ್ಯಕ್ರಮ, ಆ.30ರಂದು ಮುಹೂರ್ತ ನೆರವೇರಲಿದೆ. ಗುರುವಾರ (ಆ.27) ಶ್ರೀರಂಗಪಟ್ಟಣದ ಮಹದೇವಪುರ ಗ್ರಾಮದ ಪಾವನಾ ಅವರ ನಿವಾಸದಲ್ಲಿ ಅರಿಶಿಣ ಶಾಸ್ತ್ರ ಮಾಡಲಾಗಿದೆ.
ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಚಿಕ್ಕಣ್ಣ (Chikkanna) ಅವರು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದು, ಈಗಾಗಲೇ ಮದುವೆ ಶಾಸ್ತ್ರಗಳು ಆರಂಭ ಆಗಿವೆ. ಪಾವನಾ ಅವರನ್ನು ಚಿಕ್ಕಣ್ಣ ಕೈ ಹಿಡಿಯುತ್ತಿದ್ದಾರೆ. ಆಗಸ್ಟ್ 29ರಂದು ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಆಗಸ್ಟ್ 30ರಂದು ಮುಹೂರ್ತ ನೆರವೇರಲಿದೆ. ಗುರುವಾರ (ಆಗಸ್ಟ್ 27) ಶ್ರೀರಂಗಪಟ್ಟಣದ ಮಹದೇವಪುರ ಗ್ರಾಮದ ಪಾವನಾ ಅವರ ನಿವಾಸದಲ್ಲಿ ಅರಿಶಿಣ ಶಾಸ್ತ್ರ ಮಾಡಲಾಗಿದೆ. ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ನಡೆದ ಈ ಶಾಸ್ತ್ರದ ಫೋಟೋಗಳು ಲಭ್ಯವಾಗಿವೆ. ಚಿಕ್ಕಣ್ಣ ಅವರ ಮನೆಯಲ್ಲೂ ಅರಿಶಿಣ ಶಾಸ್ತ್ರ ನಡೆದಿದೆ. ಎರಡೂ ಕುಟುಂಬಗಳಲ್ಲಿ ಮದುವೆಯ ಸಂಭ್ರಮ ಜೋರಾಗಿದೆ. ಮೈಸೂರಿನ ಸ್ಪೆಕ್ಟ್ರಂ ಹಾಲ್‌ನಲ್ಲಿ ಚಿಕ್ಕಣ್ಣ ಹಾಗೂ ಪಾವನಾ ಅವರ ಮದುವೆ ಅದ್ದೂರಿಯಾಗಿ ನಡೆಯಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
40 ಕೋಟಿ ಸಾಲದಿಂದ 19,000 ಕೋಟಿ ಸಾಮ್ರಾಜ್ಯ ಕಟ್ಟಿದ ಸ್ಪೂರ್ತಿದಾಯಕ ಕಥೆ
RSS ನೋಂದಣಿ ವಿವಾದ: ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಅಶೋಕ್ ಕೌಂಟರ್

