ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ

Updated on: Aug 27, 2026 | 7:57 PM

ನಟ ಚಿಕ್ಕಣ್ಣ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದು, ಈಗಾಗಲೇ ಮದುವೆ ಶಾಸ್ತ್ರಗಳು ಶುರುವಾಗಿವೆ. ಪಾವನಾ ಅವರನ್ನು ಚಿಕ್ಕಣ್ಣ ಕೈ ಹಿಡಿಯುತ್ತಿದ್ದಾರೆ. ಆ.29ರಂದು ಆರತಕ್ಷತೆ ಕಾರ್ಯಕ್ರಮ, ಆ.30ರಂದು ಮುಹೂರ್ತ ನೆರವೇರಲಿದೆ. ಗುರುವಾರ (ಆ.27) ಶ್ರೀರಂಗಪಟ್ಟಣದ ಮಹದೇವಪುರ ಗ್ರಾಮದ ಪಾವನಾ ಅವರ ನಿವಾಸದಲ್ಲಿ ಅರಿಶಿಣ ಶಾಸ್ತ್ರ ಮಾಡಲಾಗಿದೆ.

ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಚಿಕ್ಕಣ್ಣ (Chikkanna) ಅವರು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದು, ಈಗಾಗಲೇ ಮದುವೆ ಶಾಸ್ತ್ರಗಳು ಆರಂಭ ಆಗಿವೆ. ಪಾವನಾ ಅವರನ್ನು ಚಿಕ್ಕಣ್ಣ ಕೈ ಹಿಡಿಯುತ್ತಿದ್ದಾರೆ. ಆಗಸ್ಟ್ 29ರಂದು ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಆಗಸ್ಟ್ 30ರಂದು ಮುಹೂರ್ತ ನೆರವೇರಲಿದೆ. ಗುರುವಾರ (ಆಗಸ್ಟ್ 27) ಶ್ರೀರಂಗಪಟ್ಟಣದ ಮಹದೇವಪುರ ಗ್ರಾಮದ ಪಾವನಾ ಅವರ ನಿವಾಸದಲ್ಲಿ ಅರಿಶಿಣ ಶಾಸ್ತ್ರ ಮಾಡಲಾಗಿದೆ. ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ನಡೆದ ಈ ಶಾಸ್ತ್ರದ ಫೋಟೋಗಳು ಲಭ್ಯವಾಗಿವೆ. ಚಿಕ್ಕಣ್ಣ ಅವರ ಮನೆಯಲ್ಲೂ ಅರಿಶಿಣ ಶಾಸ್ತ್ರ ನಡೆದಿದೆ. ಎರಡೂ ಕುಟುಂಬಗಳಲ್ಲಿ ಮದುವೆಯ ಸಂಭ್ರಮ ಜೋರಾಗಿದೆ. ಮೈಸೂರಿನ ಸ್ಪೆಕ್ಟ್ರಂ ಹಾಲ್‌ನಲ್ಲಿ ಚಿಕ್ಕಣ್ಣ ಹಾಗೂ ಪಾವನಾ ಅವರ ಮದುವೆ ಅದ್ದೂರಿಯಾಗಿ ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More