AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಷ್ಣುವರ್ಧನ್ ಅಮೃತ ಮಹೋತ್ಸವ ನೇರಪ್ರಸಾರ: ಅಭಿಮಾನಿಗಳಿಂದ ಬೃಹತ್ ಸಮಾರಂಭ

ವಿಷ್ಣುವರ್ಧನ್ ಅಮೃತ ಮಹೋತ್ಸವ ನೇರಪ್ರಸಾರ: ಅಭಿಮಾನಿಗಳಿಂದ ಬೃಹತ್ ಸಮಾರಂಭ

ಮದನ್​ ಕುಮಾರ್​
|

Updated on: Sep 27, 2026 | 8:08 AM

Share

Vishnuvardhan Amrutha Mahotsava Live: ಡಾ. ವಿಷ್ಣುವರ್ಧನ್ ಅವರ ಅಮೃತ ಮಹೋತ್ಸವ ಕಾರ್ಯಕ್ರಮದ ನೇತೃತ್ವವನ್ನು ಡಾ. ವಿಷ್ಣು ಸೇನಾ ಸಮಿತಿ ವಹಿಸಿಕೊಂಡಿದೆ. ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನು ವೀರಕಪುತ್ರ ಶ್ರೀನಿವಾಸ್ ಅವರು ವಹಿಸಿಕೊಂಡಿದ್ದಾರೆ. ಕನ್ನಡ ಚಿತ್ರರಂಗದ ವಿವಿಧ ಸಂಘಟನೆಗಳು ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವದಲ್ಲಿ ಭಾಗವಹಿಸುತ್ತಿವೆ. ಲೈವ್ ವಿಡಿಯೋ ಇಲ್ಲಿದೆ ನೋಡಿ..

ಕನ್ನಡ ಚಿತ್ರರಂಗದ ಅಪ್ರತಿಮ ನಟ, ‘ಸಾಹಸ ಸಿಂಹ’ ಡಾ. ವಿಷ್ಣುವರ್ಧನ್ ಅವರ ಅಮೃತ ಮಹೋತ್ಸವವನ್ನು ಬೆಂಗಳೂರಿನ ಹೊಸಕೆರೆಹಳ್ಳಿಯ ನಂದಿ ಲಿಂಕ್ ಗ್ರೌಂಡ್‌ನಲ್ಲಿ ಇಂದು (ಸೆಪ್ಟೆಂಬರ್ 27) ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ನಡೆಯಲಿರುವ ಈ ಬೃಹತ್ ಸಮಾರಂಭವು ಡಾ. ವಿಷ್ಣುವರ್ಧನ್ ಅವರ ಮೇಲಿನ ಅಪಾರ ಅಭಿಮಾನ, ಅವರ ಕಲಾ ಬದುಕು ಹಾಗೂ ಕನ್ನಡ ಚಿತ್ರರಂಗಕ್ಕೆ ಅವರು ನೀಡಿದ ಅಪೂರ್ವ ಕೊಡುಗೆಯನ್ನು ಸ್ಮರಿಸುವ ಒಂದು ವಿಶಿಷ್ಟ ಸಂಭ್ರಮವಾಗಲಿದೆ. ದಿನವಿಡೀ ವಿವಿಧ ಸಾಂಸ್ಕೃತಿಕ, ಸಂಗೀತ ಹಾಗೂ ವಿಶೇಷ ಕಾರ್ಯಕ್ರಮಗಳ ಮೂಲಕ ಡಾ. ವಿಷ್ಣುವರ್ಧನ್ ಅವರ ಕಲಾ ಬದುಕು, ವ್ಯಕ್ತಿತ್ವ ಮತ್ತು ಕನ್ನಡ ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸಲಾಗುತ್ತದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘ, ನಿರ್ದೇಶಕರ ಸಂಘ, ಕಾರ್ಮಿಕರ ಒಕ್ಕೂಟ ಹಾಗೂ ಕಲಾವಿದರ ಸಂಘ ಸೇರಿದಂತೆ ಕನ್ನಡ ಚಿತ್ರರಂಗದ ವಿವಿಧ ಸಂಘಟನೆಗಳು ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವದಲ್ಲಿ ಭಾಗವಹಿಸುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More