ವಿಷ್ಣುವರ್ಧನ್ ಅಮೃತ ಮಹೋತ್ಸವ ನೇರಪ್ರಸಾರ: ಅಭಿಮಾನಿಗಳಿಂದ ಬೃಹತ್ ಸಮಾರಂಭ
Vishnuvardhan Amrutha Mahotsava Live: ಡಾ. ವಿಷ್ಣುವರ್ಧನ್ ಅವರ ಅಮೃತ ಮಹೋತ್ಸವ ಕಾರ್ಯಕ್ರಮದ ನೇತೃತ್ವವನ್ನು ಡಾ. ವಿಷ್ಣು ಸೇನಾ ಸಮಿತಿ ವಹಿಸಿಕೊಂಡಿದೆ. ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನು ವೀರಕಪುತ್ರ ಶ್ರೀನಿವಾಸ್ ಅವರು ವಹಿಸಿಕೊಂಡಿದ್ದಾರೆ. ಕನ್ನಡ ಚಿತ್ರರಂಗದ ವಿವಿಧ ಸಂಘಟನೆಗಳು ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವದಲ್ಲಿ ಭಾಗವಹಿಸುತ್ತಿವೆ. ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕನ್ನಡ ಚಿತ್ರರಂಗದ ಅಪ್ರತಿಮ ನಟ, ‘ಸಾಹಸ ಸಿಂಹ’ ಡಾ. ವಿಷ್ಣುವರ್ಧನ್ ಅವರ ಅಮೃತ ಮಹೋತ್ಸವವನ್ನು ಬೆಂಗಳೂರಿನ ಹೊಸಕೆರೆಹಳ್ಳಿಯ ನಂದಿ ಲಿಂಕ್ ಗ್ರೌಂಡ್‌ನಲ್ಲಿ ಇಂದು (ಸೆಪ್ಟೆಂಬರ್ 27) ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ನಡೆಯಲಿರುವ ಈ ಬೃಹತ್ ಸಮಾರಂಭವು ಡಾ. ವಿಷ್ಣುವರ್ಧನ್ ಅವರ ಮೇಲಿನ ಅಪಾರ ಅಭಿಮಾನ, ಅವರ ಕಲಾ ಬದುಕು ಹಾಗೂ ಕನ್ನಡ ಚಿತ್ರರಂಗಕ್ಕೆ ಅವರು ನೀಡಿದ ಅಪೂರ್ವ ಕೊಡುಗೆಯನ್ನು ಸ್ಮರಿಸುವ ಒಂದು ವಿಶಿಷ್ಟ ಸಂಭ್ರಮವಾಗಲಿದೆ. ದಿನವಿಡೀ ವಿವಿಧ ಸಾಂಸ್ಕೃತಿಕ, ಸಂಗೀತ ಹಾಗೂ ವಿಶೇಷ ಕಾರ್ಯಕ್ರಮಗಳ ಮೂಲಕ ಡಾ. ವಿಷ್ಣುವರ್ಧನ್ ಅವರ ಕಲಾ ಬದುಕು, ವ್ಯಕ್ತಿತ್ವ ಮತ್ತು ಕನ್ನಡ ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸಲಾಗುತ್ತದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘ, ನಿರ್ದೇಶಕರ ಸಂಘ, ಕಾರ್ಮಿಕರ ಒಕ್ಕೂಟ ಹಾಗೂ ಕಲಾವಿದರ ಸಂಘ ಸೇರಿದಂತೆ ಕನ್ನಡ ಚಿತ್ರರಂಗದ ವಿವಿಧ ಸಂಘಟನೆಗಳು ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವದಲ್ಲಿ ಭಾಗವಹಿಸುತ್ತಿವೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
