ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್

Updated on: Jul 02, 2026 | 5:43 PM

ಮುಖ್ಯಾಂಶಗಳು

  • 48ನೇ ವಸಂತಕ್ಕೆ ಕಾಲಿಟ್ಟಿರುವ ಗಣೇಶ್ ಅವರಿಗೆ ಅಭಿಮಾನಿಗಳ ಶುಭಾಶಯ.
  • ತಮ್ಮ ಹುಟ್ಟುಹಬ್ಬದ ಪ್ರಯುಕ್ತ ತಿರುಪತಿಗೆ ಭೇಟಿ ನೀಡಿದ್ದಾರೆ ನಟ ಗಣೇಶ್.
  • ಗಣೇಶ್ ನಟಿಸಿರುವ ಎರಡು ಸಿನಿಮಾಗಳ ರಿಲೀಸ್ ದಿನಾಂಕ ಘೋಷಣೆ ಆಗಿದೆ.

ಕನ್ನಡ ಚಿತ್ರರಂಗದ ಖ್ಯಾತ ನಟ ‘ಗೋಲ್ಡನ್ ಸ್ಟಾರ್’ ಗಣೇಶ್ ಅವರಿಗೆ ಇಂದು (ಜುಲೈ 2) ಹುಟ್ಟುಹಬ್ಬದ ಸಂಭ್ರಮ. ಹುಟ್ಟುಹಬ್ಬದ ಪ್ರಯುಕ್ತ ಅವರು ತಿರುಪತಿಗೆ ಭೇಟಿ ನೀಡಿದ್ದಾರೆ. 48ನೇ ವಸಂತಕ್ಕೆ ಕಾಲಿಟ್ಟಿರುವ ಗಣೇಶ್ ಅವರಿಗೆ ಅಭಿಮಾನಿಗಳು ಜನ್ಮದಿನದ ಶುಭಾಶಯ ತಿಳಿಸುತ್ತಿದ್ದಾರೆ. ಸಿನಿಮಾ ಬಗ್ಗೆ ಕೂಡ ಒಂದು ಗುಡ್ ನ್ಯೂಸ್ ಸಿಕ್ಕಿದೆ.

ನಟ ‘ಗೋಲ್ಡನ್ ಸ್ಟಾರ್’ ಗಣೇಶ್ (Golden Star Ganesh) ಅವರಿಗೆ ಇಂದು (ಜುಲೈ 2) ಹುಟ್ಟುಹಬ್ಬದ ಸಂಭ್ರಮ. ಹುಟ್ಟುಹಬ್ಬದ ಪ್ರಯುಕ್ತ ಅವರು ತಿರುಪತಿಗೆ ಭೇಟಿ ನೀಡಿದ್ದಾರೆ. ತಿರುಪತಿಯಲ್ಲಿ ದೇವರ ದರ್ಶನ ಪಡೆದಿದ್ದಾರೆ. 48ನೇ ವಸಂತಕ್ಕೆ ಕಾಲಿಟ್ಟಿರುವ ಗಣೇಶ್ ಅವರಿಗೆ ಅಭಿಮಾನಿಗಳು ಜನ್ಮದಿನದ ಶುಭಾಶಯ ತಿಳಿಸುತ್ತಿದ್ದಾರೆ. ಇನ್ನು, ಗಣೇಶ್ ಅವರ ಬರ್ತ್​ಡೇ ಪ್ರಯುಕ್ತ ಅಭಿಮಾನಿಗಳಿಗೆ ಡಬಲ್ ಗಿಫ್ಟ್ ಸಿಕ್ಕಿದೆ. ಹೌದು, ಗಣೇಶ್ ನಟಿಸಿರುವ 2 ಸಿನಿಮಾಗಳ ರಿಲೀಸ್ ದಿನಾಂಕ ಘೋಷಣೆ ಆಗಿದೆ. ಅಕ್ಟೋಬರ್ 2ರಂದು ‘ಪಿನಾಕ’ ಸಿನಿಮಾ ತೆರೆಕಾಣಲಿದೆ. ಅಕ್ಟೋಬರ್ 16ಕ್ಕೆ ‘ಬೃಂದಾವಿಹಾರಿ’ ಸಿನಿಮಾ ರಿಲೀಸ್ ಆಗಲಿದೆ. ಹೀಗೆ ಬ್ಯಾಕ್ ಟು ಬ್ಯಾಕ್ ಎರಡು ಸಿನಿಮಾಗಳು ಬಿಡುಗಡೆ ಆಗಲಿರುವ ಸುದ್ದಿ ತಿಳಿದು ಅಭಿಮಾನಿಗಳಿಗೆ ಖುಷಿ ಆಗಿದೆ. ಕೇವಲ 14 ದಿನಗಳ ಅಂತರದಲ್ಲಿ ಗಣೇಶ್ ಅಭಿನಯಿಸಿರುವ ಎರಡು ಸಿನಿಮಾಗಳನ್ನು ನೋಡುವ ಅವಕಾಶ ಅಭಿಮಾನಿಗಳಿಗೆ ಸಿಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More