ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ

Edited By:

Updated on: Jan 11, 2026 | 11:37 AM

ನಟ ರಕ್ಷಿತ್ ಶೆಟ್ಟಿ ಅವರು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಎಲ್ಲಿಯೂ ಕಾಣಿಸಿಕೊಳ್ಳುತ್ತಿಲ್ಲ ಎಂಬುದು ಅಭಿಮಾನಿಗಳ ದೂರು. ಈಗ ಅವರು ಊರಿನ ನೇಮೋತ್ಸವದಲ್ಲಿ ಭಾಗಿಯಾಗಿದ್ದಾರೆ. ಉಡುಪಿ ತಾಲೂಕಿನ ಅಲೆವೂರಿನ ಕಲ್ಯಾಣ ನಗರದಲ್ಲಿ ನೇಮೋತ್ಸವ ನಡೆದಿದೆ. ಅಲೆವೂರು ದೊಡ್ಡಮನೆ ಮನೆತನದವರು ನಿರ್ವಹಿಸುವ ನೇಮೋತ್ಸವ ಇದು.

ಸ್ಯಾಂಡಲ್​ವುಡ್ ನಟ ರಕ್ಷಿತ್ ಶೆಟ್ಟಿ (Rakshit Shetty) ಅವರು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಎಲ್ಲಿಯೂ ಕಾಣಿಸಿಕೊಳ್ಳುತ್ತಿಲ್ಲ. ಈಗ ಅವರು ಊರಿನ ನೇಮೋತ್ಸವದಲ್ಲಿ ಭಾಗಿಯಾಗಿದ್ದಾರೆ. ಉಡುಪಿ (Udupi) ತಾಲೂಕಿನ ಅಲೆವೂರಿನ ಕಲ್ಯಾಣ ನಗರದಲ್ಲಿ ನೇಮೋತ್ಸವ ನಡೆದಿದೆ. ಅಲೆವೂರು ದೊಡ್ಡಮನೆ ಮನೆತನದವರು ನಿರ್ವಹಿಸುವ ನೇಮೋತ್ಸವ (Nemotsava) ಇದು. ಅಲೆವೂರು ದೊಡ್ಡಮನೆ ಕುಟುಂಬದ ಕುಡಿ ಆಗಿರುವ ರಕ್ಷಿತ್ ಶೆಟ್ಟಿ ಅವರು ವೈದ್ಯನಾಥ ಬಬ್ಬು ಸ್ವಾಮಿ ದೈವದ ನೇಮೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. ಬಹಳ ಹೊತ್ತು ನೇಮೋತ್ಸವದಲ್ಲಿ ಕುಳಿತ ಬಳಿಕ ರಕ್ಷಿತ್ ಶೆಟ್ಟಿ ಅವರು ವಾಪಸಾದರು. ಸದ್ಯ ಮುಂಬರುವ ಸಿನಿಮಾಗಳ ಸ್ಕ್ರಿಪ್ಟ್ ಕೆಲಸದಲ್ಲಿ ರಕ್ಷಿತ್ ಶೆಟ್ಟಿ ಅವರು ಬ್ಯುಸಿಯಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.