ಹೃದಯಾಘಾತ ಆಗುವುದಕ್ಕೂ ಮುನ್ನ ರಾಜು ತಾಳಿಕೋಟೆ ಸ್ಥಿತಿ ಹೇಗಿತ್ತು? ವಿವರಿಸಿದ ಶೈನ್ ಶೆಟ್ಟಿ

Updated on: Oct 13, 2025 | 10:46 PM

ಶೈನ್ ಶೆಟ್ಟಿ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದೇ ಚಿತ್ರದ ಚಿತ್ರೀಕರಣದಲ್ಲಿ ಹಾಸ್ಯ ನಟ ರಾಜು ತಾಳಿಕೋಟೆ ಅಭಿನಯಿಸುತ್ತಿದ್ದರು. ಉಡುಪಿಯಲ್ಲಿ ಶೂಟಿಂಗ್ ನಡೆಯುತ್ತಿತ್ತು. ಹೃದಯಾಘಾತದಿಂದ ರಾಜು ತಾಳಿಕೋಟೆ ನಿಧನರಾದರು. ಆ ಕುರಿತು ಮಾಧ್ಯಮದ ಜೊತೆ ಶೈನ್ ಶೆಟ್ಟಿ ಮಾತನಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..

ಬಿಗ್ ಬಾಸ್ ಖ್ಯಾತಿಯ ನಟ ಶೈನ್ ಶೆಟ್ಟಿ ಅವರು ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದೇ ಸಿನಿಮಾದ ಶೂಟಿಂಗ್​​ನಲ್ಲಿ ಹಾಸ್ಯ ನಟ ರಾಜು ತಾಳಿಕೋಟೆ (Raju Talikote) ಅವರು ಅಭಿನಯಿಸುತ್ತಿದ್ದರು. ಉಡುಪಿಯಲ್ಲಿ ಶೂಟಿಂಗ್ ನಡೆಯುತ್ತಿತ್ತು. ಹೃದಯಾಘಾತದಿಂದ (Heart Attack) ರಾಜು ತಾಳಿಕೋಟೆ ಅವರು ನಿಧನರಾದರು. ಆ ಬಗ್ಗೆ ಮಾಧ್ಯಮದ ಜೊತೆ ಶೈನ್ ಶೆಟ್ಟಿ ಮಾತನಾಡಿದ್ದಾರೆ. ‘ಅಕ್ಟೋಬರ್ 10ರಿಂದ 3 ದಿನ ಅವರ ಜೊತೆ ನಾವು ಶೂಟಿಂಗ್ ಮಾಡಿದೆವು. ನಿನ್ನೆ ಶೂಟಿಂಗ್ ಮುಗಿಸಿ ಊಟ ಮಾಡಿದ ಬಳಿಕ ಅವರಿಗೆ ಉಸಿರಾಟದ ಸಮಸ್ಯೆ ಆಗಿದೆ. ಆಸ್ಪತ್ರೆಗೆ ಕರೆದುಕೊಂಡು ಹೋದೆವು. ಅಷ್ಟರಲ್ಲಾಗಲೇ ಅವರ ಪಲ್ಸ್ ರೇಟ್ ಕಡಿಮೆ ಆಯಿತು’ ಎಂದು ಶೈನ್ ಶೆಟ್ಟಿ (Shine Shetty) ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Oct 13, 2025 10:37 PM
Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More