ಬಾಲಕನಂತೆ ಸೈಕಲ್ ಸವಾರಿ ಮಾಡಿದ ಶಿವಣ್ಣ; ವೈರಲ್ ವಿಡಿಯೋ ನೋಡಿ

Updated on: Apr 18, 2025 | 9:59 PM

ನಟ ಶಿವರಾಜ್​ಕುಮಾರ್ ಅವರು ಯಾವಾಗಲೂ ಆ್ಯಕ್ಟೀವ್ ಆಗಿರುತ್ತಾರೆ. ಅನಾರೋಗ್ಯದಿಂದ ಚೇತರಿಸಿಕೊಂಡ ಬಳಿಕ ಅವರು ಇನ್ನಷ್ಟು ಆ್ಯಕ್ಟೀವ್ ಆಗಿದ್ದಾರೆ. ಅದಕ್ಕೆ ಈ ವಿಡಿಯೋ ಸಾಕ್ಷಿ. ತಮ್ಮ ಮನೆ ಬಳಿ ಅವರು ಸೈಕಲ್ ಸವಾರಿ ಮಾಡಿದ್ದಾರೆ. ಮಕ್ಕಳ ಜೊತೆ ಬೆರೆತು ತಾವು ಕೂಡ ಬಾಲಕನಂತೆ ಸೈಕಲ್ ಓಡಿಸಿದ್ದಾರೆ.

‘ಹ್ಯಾಟ್ರಿಕ್ ಹೀರೋ’ ಶಿವರಾಜ್​ಕುಮಾರ್ (Shivarajkumar) ಅವರು ಸದಾ ಆ್ಯಕ್ಟೀವ್ ಆಗಿರುತ್ತಾರೆ. ಕ್ಯಾನ್ಸರ್​ನಿಂದ ಚೇತರಿಸಿಕೊಂಡ ಬಳಿಕ ಅವರು ಮತ್ತಷ್ಟು ಆ್ಯಕ್ಟೀವ್ ಆಗಿದ್ದಾರೆ. ಅದಕ್ಕೆ ಈ ಹೊಸ ವಿಡಿಯೋ ಸಾಕ್ಷಿ ಆಗಿದೆ. ತಮ್ಮ ಮನೆ ಬಳಿ ಶಿವಣ್ಣ ಸೈಕಲ್ (Bicycle) ಸವಾರಿ ಮಾಡಿದ್ದಾರೆ. ಮಕ್ಕಳ ಜೊತೆ ಬೆರೆತು ತಾವು ಕೂಡ ಬಾಲಕನಂತೆ ಸೈಕಲ್ ಓಡಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗುತ್ತಿದೆ. ‘45’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಕೂಡ ಶಿವಣ್ಣ (Shivanna) ಬ್ಯುಸಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More