ಸರ್ಕಾರದ ನಿರ್ಧಾರ ಸರಿಯಾಗಿಯೇ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ

Updated on: May 07, 2025 | 7:15 PM

ಪಾಕಿಸ್ತಾನದ ಉಗ್ರರ ವಿರುದ್ಧ ಭಾರತದ ಸೇನೆ ಗುಡುಗಿದೆ. ಪಹಲ್ಗಾಮ್​​ನಲ್ಲಿ ದಾಳಿ ಮಾಡಿದ ಉಗ್ರರ ಹುಟ್ಟಡಗಿಸಲು ‘ಆಪರೇಷನ್ ಸಿಂಧೂರ್’ ಹೆಸರಿನಲ್ಲಿ ಪ್ರತಿದಾಳಿ ಮಾಡಲಾಗಿದೆ. ಈ ಬಗ್ಗೆ ಅನೇಕ ಸೆಲೆಬ್ರಿಟಿಗಳು ಪ್ರತಿಕ್ರಿಯೆ ನೀಡಿದ್ದಾರೆ. ‘ಹ್ಯಾಟ್ರಿಕ್ ಹೀರೋ’ ಶಿವರಾಜ್​ಕುಮಾರ್ ಕೂಡ ಮಾತನಾಡಿದ್ದಾರೆ. ಶಿವಣ್ಣ ಮಾತನಾಡಿದ ವಿಡಿಯೋ ಇಲ್ಲಿದೆ..

ಪಾಕಿಸ್ತಾನದ ಉಗ್ರರ ವಿರುದ್ಧ ಭಾರತದ ಸೇನೆ ಗುಡುಗಿದೆ. ಪಹಲ್ಗಾಮ್​​ನಲ್ಲಿ (Pahalgam) ದಾಳಿ ಮಾಡಿದ ಉಗ್ರರ ಹುಟ್ಟಡಗಿಸಲು ‘ಆಪರೇಷನ್ ಸಿಂಧೂರ್’ (Operation Sindoor) ಹೆಸರಿನಲ್ಲಿ ಪ್ರತಿದಾಳಿ ಮಾಡಲಾಗಿದೆ. ಈ ಬಗ್ಗೆ ಅನೇಕ ಸೆಲೆಬ್ರಿಟಿಗಳು ಪ್ರತಿಕ್ರಿಯೆ ನೀಡಿದ್ದಾರೆ. ‘ಹ್ಯಾಟ್ರಿಕ್ ಹೀರೋ’ ಶಿವರಾಜ್​ಕುಮಾರ್ (Shivarajkumar) ಕೂಡ ಮಾತನಾಡಿದ್ದಾರೆ. ‘ನನಗೆ ಹುಷಾರಿರಲಿಲ್ಲ. ಹಾಗಾಗಿ ಈ ಘಟನೆ ಬಗ್ಗೆ ಹೆಚ್ಚು ಗೊತ್ತಿರಲಿಲ್ಲ. ಈಗ ಕೇಳಿದೆ. ಸರ್ಕಾರ ಏನೇ ನಿರ್ಧಾರ ತೆಗೆದುಕೊಂಡರೂ ಸರಿಯಾಗಿ ಇರುತ್ತದೆ. ಅದು ತಿಳಿಯದೇ ಇಂಥ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಪಹಲ್ಗಾಮ್​​ನಲ್ಲಿ ನಡೆದ ದಾಳಿ ತುಂಬ ನೋವಿನ ಘಟನೆ’ ಎಂದು ಶಿವಣ್ಣ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More