‘ಇಂಡಸ್ಟ್ರಿಗೆ ಬಂದ್ಮೇಲೆ ನಾನು 25 ಬಾರಿ ಕಾವೇರಿ ಹೋರಾಟ ಮಾಡಿದೀನಿ, ಪರಿಹಾರ ಸಿಕ್ಕಿಲ್ಲ’: ಉಪೇಂದ್ರ

Updated on: Sep 29, 2023 | 3:07 PM

ಕಾವೇರಿ ನೀರಿಗಾಗಿ ನಡೆಯುತ್ತಿರುವ ಹೋರಾಟದಲ್ಲಿ ನಟ, ನಿರ್ದೇಶಕ ಉಪೇಂದ್ರ ಭಾಗಿಯಾಗಿದ್ದಾರೆ. ‘ಪರಿಹಾರವೇ ಆಗದ ಸಮಸ್ಯೆ ಎಂದರೆ ಅದು ಇದೇ ಇರಬೇಕು. ನಾವೆಲ್ಲರೂ ವಿಚಾರವಂತರಾಗಬೇಕು. ಸ್ವಲ್ಪ ವಿಚಾರ ಮಾಡಿದರೆ ಇದರ ಹಿಂದಿನ ರಹಸ್ಯ ಏನು ಎಂಬುದು ಗೊತ್ತಾಗುತ್ತದೆ. ’ ಎಂದು ಉಪೇಂದ್ರ ಹೇಳಿದ್ದಾರೆ.

ಕಾವೇರಿ ನೀರು (Cauvery Water) ಹಂಚಿಕೆ ವಿಚಾರವಾಗಿ ಎದುರಾಗಿರುವ ಬಿಕ್ಕಟ್ಟು ಪರಿಹಾರಕ್ಕೆ ಸಕಲ ರೀತಿಯಲ್ಲಿ ಪ್ರಯತ್ನ ನಡೆಯುತ್ತಿದೆ. ಇಂದು (ಸೆಪ್ಟೆಂಬರ್​ 29) ಕರ್ನಾಟಕ ಬಂದ್​ ಮಾಡಲಾಗಿದೆ. ಕನ್ನಡ ಚಿತ್ರರಂಗ ಕೂಡ ಈ ಬಂದ್​ಗೆ ಬೆಂಬಲ ನೀಡಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Karnataka Film Chamber of Commerce) ಜೊತೆ ಸೇರಿ ಅನೇಕ ಸೆಲೆಬ್ರಿಟಿಗಳು ಈ ಹೋರಾಟದಲ್ಲಿ ಭಾಗಿ ಆಗಿದ್ದಾರೆ. ಪ್ರತಿಭಟನೆಯಲ್ಲಿ ಭಾಗಿಯಾದ ಉಪೇಂದ್ರ ಮಾತನಾಡಿದ್ದಾರೆ. ‘ಏನು ಮಾತನಾಡಬೇಕೋ ತಿಳಿಯುತ್ತಿಲ್ಲ. ನಾನು ಚಿತ್ರರಂಗಕ್ಕೆ ಬಂದಾಗಿನಿಂದ ಸುಮಾರು 20ರಿಂದ 25 ಬಾರಿ ಈ ಹೋರಾಟ ಮಾಡಿದ್ದೇನೆ. ಆದರೆ ಇಂದಿಗೂ ಪರಿಹಾರ ಸಿಕ್ಕಿಲ್ಲ. ಪರಿಹಾರವೇ ಆಗದ ಸಮಸ್ಯೆ ಎಂದರೆ ಅದು ಇದೇ ಇರಬೇಕು. ನಾವೆಲ್ಲರೂ ವಿಚಾರವಂತರಾಗಬೇಕು. ಸ್ವಲ್ಪ ವಿಚಾರ ಮಾಡಿದರೆ ಇದರ ಹಿಂದಿನ ರಹಸ್ಯ ಏನು ಎಂಬುದು ಗೊತ್ತಾಗುತ್ತದೆ. ದೇವರು ಎಲ್ಲರಿಗೂ ವೈಚಾರಿಕತೆ ಕೊಡಲಿ. ಬುದ್ಧಿವಂತರಾಗೋಣ. ನಮ್ಮ ಸಮಸ್ಯೆಯನ್ನು ನಾವೇ ಪರಿಹರಿಸಿಕೊಳ್ಳೋಣ’ ಎಂದು ಉಪೇಂದ್ರ ( Upendra) ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More