ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗಿಯಾದ ಕನ್ನಡ ಚಿತ್ರರಂಗದ ತಾರೆಯರು

Edited By:

Updated on: Oct 21, 2026 | 5:47 PM

ಮೈಸೂರಿನಲ್ಲಿ ದಸರಾ ಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಸಡಗರದಲ್ಲಿ ಕನ್ನಡ ಚಿತ್ರರಂಗ ಕೂಡ ಭಾಗಿಯಾಗಿದೆ. ಜಂಬೂಸವಾರಿ ಮೆರವಣಿಗೆಯಲ್ಲಿ ಕನ್ನಡ ಚಿತ್ರರಂಗವನ್ನು ಪ್ರತಿನಿಧಿಸಲು ಅನೇಕ ಸೆಲೆಬ್ರಿಟಿಗಳು ಬಂದಿದ್ದಾರೆ. ಹಿರಿಯ ನಟ-ನಟಿಯರಿಗೆ ಹಾಗೂ ಯುವ ಕಲಾವಿದರಿಗೆ ಎರಡು ಪ್ರತ್ಯೇಕ ಬಸ್ ವ್ಯವಸ್ಥೆ ಮಾಡಲಾಗಿದೆ.

ಮೈಸೂರಿನಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಸಡಗರದಲ್ಲಿ ಕನ್ನಡ ಚಿತ್ರರಂಗ ಕೂಡ ಭಾಗಿಯಾಗಿದೆ. ಜಂಬೂಸವಾರಿ ಮೆರವಣಿಗೆಯಲ್ಲಿ ಕನ್ನಡ ಚಿತ್ರರಂಗವನ್ನು ಪ್ರತಿನಿಧಿಸಲು ಅನೇಕ ಸೆಲೆಬ್ರಿಟಿಗಳು ಬಂದಿದ್ದಾರೆ. ಹಿರಿಯ ನಟ-ನಟಿಯರಿಗೆ ಹಾಗೂ ಯುವ ಕಲಾವಿದರಿಗೆ ಎರಡು ಪ್ರತ್ಯೇಕ ಬಸ್ ವ್ಯವಸ್ಥೆ ಮಾಡಲಾಗಿದೆ. ರವಿಚಂದ್ರನ್, ಜಯಮಾಲಾ, ರಮೇಶ್ ಅರವಿಂದ್, ಪ್ರಜ್ವಲ್ ದೇವರಾಜ್, ಪೂಜಾ ಗಾಂಧಿ, ಶರಣ್, ದುನಿಯಾ ವಿಜಯ್, ಸತೀಶ್ ನೀನಾಸಂ ಸೇರಿದಂತೆ ಅನೇಕ ಕಲಾವಿದರು ಭಾಗಿಯಾಗಿದ್ದಾರೆ. ಕನ್ನಡ ಚಿತ್ರರಂಗದ ದಿವಂಗತ ಸೆಲೆಬ್ರಿಟಿಗಳನ್ನು ಸ್ಮರಿಸುವ ಉದ್ದೇಶದಿಂದ ಅವರ ಫೋಟೋಗಳನ್ನು ಹಾಕಲಾಗಿದೆ. ಚಿತ್ರರಂಗದ ಇತಿಹಾಸವನ್ನು ನೆನಪಿಸುವಂತಹ ಹಲವು ಸಿನಿಮಾಗಳ ಬಗ್ಗೆ ಮಾಹಿತಿ ಕೂಡ ಈ ಬಸ್​ಗಳಲ್ಲಿ ಪ್ರದರ್ಶಿಸಲಾಗಿದೆ. ಜಂಬೂಸವಾರಿಯ ಮೆರವಣಿಗೆಯಲ್ಲಿ ಭಾಗಿಯಾದ ಸೆಲೆಬ್ರಿಟಿಗಳನ್ನು ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಂಗಳ ರಾಜ್

ಮಂಗಳ ರಾಜ್ ಮೂಲತಃ ಮಧುಗಿರಿ ಬಳಿಯ ರತ್ನಗಿರಿ ರಂಗಾಪುರದವರು. ಇವರು ಸುದ್ದಿ ಮಧ್ಯಮಕ್ಕೆ ಕಾಲಿಟ್ಟು 13 ವರ್ಷಗಳಾಗಿವೆ. ಈಟಿವಿಯಲ್ಲಿ ಇಂಟರ್​ನ್​ಶಿಪ್​ , ಮಧ್ಯಮದ ಅ, ಆ ಇ ಈ ಕಲಿತಿದ್ದು ಕಸ್ತೂರಿ ನ್ಯೂಸ್ 24 ನಲ್ಲಿ ನಂತ್ರ ರಾಜ್ ನ್ಯೂಸ್, ದಿಗ್ವಿಜಯ ನ್ಯೂಸ್ ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. 2021ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮುಂದುವರಿಸಿದ್ದಾರೆ. ಸಿನಿಮಾ ಅಂದ್ರೆ ಬಾಲ್ಯದಿಂದಲೂ ಹುಚ್ಚು. ಅರಸಿ ಬಂದಿದ್ದು ಸಿನಿಮಾ ಜರ್ನಲಿಸ್ಟ್ ಕೆಲಸ. ಸಿನಿಮಾ ಸುದ್ದಿಗಳ ಕವರೇಜ್, ಸಿನಿಮಾ ಹಾಗೂ ಸಿನಿಮಾ ಮಂದಿಯ ವಿವಾದಗಳು, ವಿಮರ್ಶೆ, ಸಿನಿಮಾದವರ ಸಾವು ನೋವು ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವುಗಳ ವರದಿಗಾರಿಕೆ ಇವರ ಕಾಯಕ. ಸಿನಿಮಾ ನೋಡುವುದೇ ಎಲ್ಲಾ ಆಸಕ್ತಿಗಳಿಗಿಂತ ಹೆಚ್ಚು ಆಸಕ್ತಿ.

Read More