ರಚಿತಾ ರಾಮ್​ ಕಾರು ಚಾಲಕನ ಅಜಾಗರೂಕತೆ; ಕೂದಲೆಳೆಯಲ್ಲಿ ತಪ್ಪಿದ ದುರಂತ

Updated on: Aug 14, 2023 | 8:44 PM

ಸಿನಿಮಾ ಕೆಲಸಗಳ ಬಿಡುವಿನಲ್ಲಿ ನಟಿ ರಚಿತಾ ರಾಮ್​ ಅವರು ಫಲಪುಷ್ಪ ಪ್ರದರ್ಶನ ನೋಡಲು ಬಂದಿದ್ದಾರೆ. ಈ ವೇಳೆ ಲಾಲ್​ಬಾಗ್​ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ರಚಿತಾ ರಾಮ್​ ಅವರ ಕಾರು ಡಿಕ್ಕಿ ಆಗಿದೆ. ವೇಗ ಕಡಿಮೆ ಇದ್ದಿದ್ದರಿಂದ ಸ್ವಲ್ಪದರಲ್ಲೇ ದುರಂತ ತಪ್ಪಿದೆ. ಈ ವಿಡಿಯೋ ವೈರಲ್​ ಆಗಿದೆ.

ನಟಿ ರಚಿತಾ ರಾಮ್​ (Rachita Ram) ಅವರು ಲಾಲ್​ಬಾಗ್​ಗೆ ಬಂದು ಫಲಪುಷ್ಪ ಪ್ರದರ್ಶನದಲ್ಲಿ ಭಾಗಿ ಆಗಿದ್ದಾರೆ. ಅವರ ಕಾರು ಚಾಲಕನ ಅಜಾಗರೂಕತೆಯಿಂದ ಅಲ್ಲಿದ್ದ ಕೆಲಸಗಾರರೊಬ್ಬರಿಗೆ ಕಾರು (Rachita Ram Car) ಡಿಕ್ಕಿ ಆಗಿದೆ. ಆದರೆ ವೇಗ ಕಡಿಮೆ ಇದ್ದಿದ್ದರಿಂದ ಅನಾಹುತ ಸ್ಪಲ್ಪದರಲ್ಲೇ ತಪ್ಪಿಹೋಗಿದೆ. ಕೂದಲೆಳೆಯಲ್ಲಿ ಆ ವ್ಯಕ್ತಿ ಬಚಾವ್​ ಆಗಿದ್ದಾರೆ. ಅದನ್ನು ಕಂಡು ಅಲ್ಲಿದ್ದ ಎಲ್ಲರೂ ನಿಟ್ಟುಸಿರು ಬಿಟ್ಟಿದ್ದಾರೆ. ಸದ್ಯ ಈ ವಿಡಿಯೋ ವೈರಲ್​ ಆಗಿದೆ. ಪ್ರತಿ ಬಾರಿಯಂತೆ ಈ ವರ್ಷ ಕೂಡ ವಿಶೇಷ ಥೀಮ್​ನಲ್ಲಿ ಫಲಪುಷ್ಪ ಪ್ರದರ್ಶನ (Lalbagh Flower Show) ಆಯೋಜನೆಗೊಂಡಿದೆ. ಸಿನಿಮಾ ಮತ್ತು ಇತರೆ ಕೆಲಸಗಳಲ್ಲಿ ಬ್ಯುಸಿ ಆಗಿರುವ ರಚಿತಾ ರಾಮ್ ಅವರು ಬಿಡುವು ಮಾಡಿಕೊಂಡು ಲಾಲ್​ಬಾಗ್​ಗೆ ಭೇಟಿ ನೀಡಿದರು. ಅವರನ್ನು ನೋಡಲು ಬಂದಿದ್ದ ಅಭಿಮಾನಿಗಳು ಮುಗಿಬಿದ್ದು ಸೆಲ್ಫಿ ತೆಗೆದುಕೊಂಡರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More