ಕನ್ನಡ ಬರೆಯಲು ಪರದಾಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವರು! ವಿಡಿಯೋ ವೈರಲ್

ಕನ್ನಡ ಬರೆಯಲು ಪರದಾಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವರು! ವಿಡಿಯೋ ವೈರಲ್

ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: Ganapathi Sharma

Updated on:Feb 02, 2025 | 4:03 PM

ಕನ್ನಡ ಮತ್ತು ಸಂಸ್ಕೃತಿ ಸಚಿವರಿಗೇ ಕನ್ನಡ ಬರೆಯಲು ಬರುವುದಿಲ್ಲವೇ? ಇಂಥದ್ದೊಂದು ಪ್ರಶ್ನೆ ಮೂಡಲು ಕಾರಣವಾಗಿದ್ದು ಸಚಿವ ಶಿವರಾಜ್ ತಂಗಡಗಿ ಅವರು ಮಾಡಿಕೊಂಡ ಎಡವಟ್ಟು. ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ಅಂಗನವಾಡಿ ಕೇಂದ್ರ ಉದ್ಘಾಟನೆ ವೇಳೆ ಬೋರ್ಡ್​​ನಲ್ಲಿ ಬರೆಯುವಾಗ ತಂಗಡಗಿ ಎಡವಟ್ಟು ಮಾಡಿಕೊಂಡಿದ್ದಾರೆ. ವಿಡಿಯೋ ಇಲ್ಲಿದೆ.

ಕೊಪ್ಪಳ, ಫೆಬ್ರವರಿ 2: ಕನ್ನಡ ಬರೆಯಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರೇ ಪರದಾಡಿದ ವಿಡಿಯೋ ಈಗ ವೈರಲ್ ಆಗುತ್ತಿದೆ. ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ಅಂಗನವಾಡಿ ಕೇಂದ್ರ ಉದ್ಘಾಟನೆಗೆ ಆಗಮಿಸಿದ್ದ ಸಚಿವ ಶಿವರಾಜ ತಂಗಡಗಿ ‘‘ಶುಭವಾಗಲಿ’’ ಎಂದು ಬೋರ್ಡ್​ ಮೇಲೆ ಬರೆಯಲು ಮುಂದಾಗಿದ್ದಾರೆ. ಈ ವೇಳೆ, ಶುಭವಾಗಲಿ ಸರಿಯಾಗಿ ಬರೆಯಲಾಗದೇ ಸಚಿವ ತಂಗಡಗಿ ಯಡವಟ್ಟು ಮಾಡಿಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Feb 02, 2025 04:00 PM