Divya Suresh: ನೈಟ್ ಕರ್ಫ್ಯೂ ವೇಳೆ ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ಕಿರಿಕ್?; ವಿಡಿಯೋ ಇಲ್ಲಿದೆ
ರಾಜ್ಯದಲ್ಲಿ ನಿನ್ನೆಯಿಂದ ನೈಟ್ ಕರ್ಫ್ಯೂ ಜಾರಿಯಾಗಿದೆ. ನಂತರವೂ ಓಡಾಡುತ್ತಿದ್ದವರನ್ನು ಪೊಲೀಸರು ಮನೆಗೆ ಕಳುಹಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ನಿನ್ನೆಯಿಂದ ನೈಟ್ ಕರ್ಫ್ಯೂ ಜಾರಿಯಾಗಿದೆ. ಅದಾಗ್ಯೂ ರಾತ್ರಿ ವೇಳೆ ಸಂಚರಿಸುತ್ತಿದ್ದವರನ್ನು ಪೊಲೀಸರು ಮನೆಗೆ ಕಳುಹಿಸಿದ್ದಾರೆ. ಇದೇ ವೇಳೆ ನೈಟ್ ಕರ್ಫ್ಯೂ ವೇಳೆ ಎಂಜಿ ರಸ್ತೆಯಲ್ಲಿ ಓಡಾಡುತ್ತಿದ್ದ ಮಾಜಿ ಬಿಗ್ ಬಾಸ್ ಸ್ಪರ್ಧಿ ದಿವ್ಯಾ ಸುರೇಶ್ ಹಾಗೂ ಅವರ ಸ್ನೇಹಿತರನ್ನೂ ಪೊಲೀಸರು ಮನೆಗೆ ಕಳುಹಿಸಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ದಿವ್ಯಾ ಹಾಗೂ ಅವರ ಸ್ನೇಹಿತರು ಹೈಡ್ರಾಮಾ ನಡೆಸಿದ್ದು ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಅಲ್ಲದೇ ದಿವ್ಯಾ ಸ್ನೇಹಿತರು ಮಾಧ್ಯಮಗಳ ಕ್ಯಾಮೆರಾ ಕಿತ್ತುಕೊಳ್ಳಲು ಮುಂದಾಗಿದ್ದು, ಗೊಂದಲದ ವಾತಾವರಣಕ್ಕೆ ಕಾರಣವಾಗಿದೆ.
ಬಾರ್ ಹಾಗೂ ಪಬ್ಗಳು ರಾತ್ರಿ 10 ಗಂಟೆಯ ನಂತರ ಕ್ಲೋಸ್ ಆಗಿವೆ. ಆಗ ಅಲ್ಲಿಂದ ಹೊರಬಂದ ದಿವ್ಯಾ ಹಾಗೂ ಅವರ ಸ್ನೇಹಿತರು ಕ್ಯಾಬ್ಗಾಗಿ ಕಾಯುತ್ತಿದ್ದರು. ನಂತರ ಪೊಲೀಸರು ಅವರನ್ನು ಮನೆಗೆ ಕಳುಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಘಟನೆಯ ವಿಡಿಯೋ ಇಲ್ಲಿದೆ:

