ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೇರಿದ ಸೆಲೆಬ್ರಿಟಿಗಳು

Updated on: Mar 03, 2026 | 10:42 PM

1934ರ ಮಾರ್ಚ್ 3ರಂದು ಕನ್ನಡದ ಮೊದಲ ವಾಕ್ಚಿತ್ರ ‘ಸತಿ ಸುಲೋಚನ’ ಬಿಡುಗಡೆ ಆಗಿತ್ತು. ಕನ್ನಡ ಚಿತ್ರರಂಗಕ್ಕೆ ಈಗ 93 ವರ್ಷಗಳ ಸಂಭ್ರಮ. ಆ ಪ್ರಯುಕ್ತ ಅನೇಕ ಸೆಲೆಬ್ರಿಟಿಗಳು ಒಂದೇ ವೇದಿಕೆಯಲ್ಲಿ ಸೇರಿದ್ದಾರೆ. ನಿರ್ಮಾಪಕರ ಸಂಘದಲ್ಲಿ ವಿಶೇಷ ಕಾರ್ಯಕ್ರಮ ಮಾಡಲಾಗಿದೆ. ವಿಡಿಯೋ ನೋಡಿ..

ಕನ್ನಡದ ಮೊದಲ ವಾಕ್ಚಿತ್ರ ‘ಸತಿ ಸುಲೋಚನ’ (Sati Sulochana) 1934ರ ಮಾರ್ಚ್ 3ರಂದು ಬಿಡುಗಡೆ ಆಗಿತ್ತು. ಕನ್ನಡ ಚಿತ್ರರಂಗಕ್ಕೆ (Kannada Film Industry) ಈಗ 93 ವರ್ಷಗಳ ಸಂಭ್ರಮ. ಆ ಪ್ರಯುಕ್ತ ಅನೇಕ ಸೆಲೆಬ್ರಿಟಿಗಳು ಒಂದೇ ವೇದಿಕೆಯಲ್ಲಿ ಸೇರಿದ್ದಾರೆ. ನಿರ್ಮಾಪಕರ ಸಂಘದಲ್ಲಿ ವಿಶೇಷ ಕಾರ್ಯಕ್ರಮ ಮಾಡಲಾಗಿದೆ. ಸೃಜನ್ ಲೋಕೇಶ್ (Srujan Lokesh) ಮತ್ತು ಗಿರಿಜಾ ಲೋಕೇಶ್ ಅವರು ಅತಿಥಿಗಳಾಗಿ ಭಾಗಿಯಾಗಿದ್ದಾರೆ. ‘ಸತಿ ಸುಲೋಚನ’ ಸಿನಿಮಾದಲ್ಲಿ ಸುಬ್ಬಯ್ಯ ನಾಯ್ಡು ಅವರು ನಾಯಕನಾಗಿ ನಟಿಸಿದ್ದರು. ಕನ್ನಡ ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸುವ ಸಲುವಾಗಿ ಈ ಕಾರ್ಯಕ್ರಮ ಮಾಡಲಾಗಿದೆ. ಅನೇಕ ನಿರ್ಮಾಪಕರು ಪಾಲ್ಗೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More