AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕಾಗಿ ಒಂದಾಗುತ್ತಿದೆ ಇಡೀ ಕನ್ನಡ ಚಿತ್ರರಂಗ

ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕಾಗಿ ಒಂದಾಗುತ್ತಿದೆ ಇಡೀ ಕನ್ನಡ ಚಿತ್ರರಂಗ

ಮಾಲತೇಶ ಜಗ್ಗೀನ್
| Edited By: |

Updated on: Sep 27, 2026 | 10:11 AM

Share

ವಿಷ್ಣುವರ್ಧನ್ ಅವರ ಅಮೃತ ಮಹೋತ್ಸವಕ್ಕೆ ಅದ್ದೂರಿಯಾದ ವೇದಿಕೆ ಸಜ್ಜಾಗಿದೆ. ಸಾಕಷ್ಟು ಸಂಖ್ಯೆಯ ಅಭಿಮಾನಿಗಳು ಭಾಗಿಯಾಗುತ್ತಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಯಾವೆಲ್ಲ ಸೆಲೆಬ್ರಿಟಿಗಳು ಭಾಗಿ ಆಗಲಿದ್ದಾರೆ ಎಂಬ ಬಗ್ಗೆ ವಿಷ್ಣು ಸೇನಾ ಸಮಿತಿಯ ವೀಕರಪುತ್ರ ಶ್ರೀನಿವಾಸ್ ಮಾತನಾಡಿದ್ದಾರೆ.

ಸಾಹಸ ಸಿಂಹ ವಿಷ್ಣುವರ್ಧನ್ ಅವರ ಅಮೃತ ಮಹೋತ್ಸವಕ್ಕೆ ಅದ್ದೂರಿಯಾದ ವೇದಿಕೆ ಸಜ್ಜಾಗಿದೆ. ಬೆಂಗಳೂರಿನ ಗಾಳಿ ಆಂಜನೇಯ ದೇವಸ್ಥಾನದಿಂದ ಕನ್ನಡದ ಬೃಹತ್ ಬಾವುಟವನ್ನು ತೆಗೆದುಕೊಂಡು ಹೋಗಲಾಗಿದೆ. ಸಾಕಷ್ಟು ಸಂಖ್ಯೆಯ ಅಭಿಮಾನಿಗಳು ಇದರಲ್ಲಿ ಭಾಗಿಯಾಗಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯ ತನಕ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಯಾವೆಲ್ಲ ಸೆಲೆಬ್ರಿಟಿಗಳು ಭಾಗಿ ಆಗಲಿದ್ದಾರೆ ಎಂಬ ಬಗ್ಗೆ ವಿಷ್ಣು ಸೇನಾ ಸಮಿತಿಯ ವೀಕರಪುತ್ರ ಶ್ರೀನಿವಾಸ್ ಅವರು ಮಾತನಾಡಿದ್ದಾರೆ. ‘ರಾಜ್ಯದ ಮೂಲೆ ಮೂಲೆಯಿಂದ ಅಭಿಮಾನಿಗಳು ಬರುತ್ತಿದ್ದಾರೆ. ವಿಷ್ಣುವರ್ಧನ್ ಮೇಲಿನ ಅಭಿಮಾನಕ್ಕೆ ಬೆಲೆ ಕಟ್ಟಲು ಆಗಲ್ಲ. ಮುಖ್ಯಮಂತ್ರಿಗಳು ಬರುತ್ತಿದ್ದಾರೆ. ಚಿತ್ರರಂಗದ ಎಲ್ಲರೂ ಬರುತ್ತಿದ್ದಾರೆ. ಎಲ್ಲ ಪ್ರಮುಖ ಕಲಾವಿದರು ಮೆಸೇಜ್ ಮಾಡಿದ್ದಾರೆ. ಸುಹಾಸಿನಿ, ರೋಜಾ, ಊರ್ವಶಿ, ಅಂಬಿಕಾ ಮುಂತಾದ ನಟಿಯರು ಈಗಾಗಲೇ ಬಂದಿದ್ದಾರೆ. ಸುದೀಪ್, ಶಿವರಾಜ್​ಕುಮಾರ್, ದುನಿಯಾ ವಿಜಯ್, ರವಿಚಂದ್ರನ್, ಡಾಲಿ ಧನಂಜಯ ಸೇರಿದಂತೆ ಎಲ್ಲರೂ ಬರುವುದಾಗಿ ಒಪ್ಪಿಕೊಂಡಿದ್ದಾರೆ’ ಎಂದು ವೀರಕಪುತ್ರ ಶ್ರೀನಿವಾಸ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮಾಲತೇಶ ಜಗ್ಗೀನ್
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More