ಒಂದೇ ಒಂದು ಗುಡ್ ನ್ಯೂಸ್ಗಾಗಿ ಕಾಯುತ್ತಿದೆ ಚಿತ್ರರಂಗ; ಮತ್ತೆ ರಂಗೇರಲಿದೆ ಗಾಂಧಿನಗರ
ಕೊರೊನಾ ವೈರಸ್ ಎರಡನೇ ಅಲೆ ಕಾರಣದಿಂದ ಚಿತ್ರಮಂದಿರದಲ್ಲಿ ಕೇವಲ ಶೇ.50ರಷ್ಟು ಆಸನ ಭರ್ತಿಗೆ ಮಾತ್ರ ಅವಕಾಶ ಇದೆ. ಶೇ.100ರಷ್ಟು ಆಸನ ಭರ್ತಿಗೆ ಅನುಮತಿ ಸಿಗಲಿ ಎಂದು ಇಡೀ ಚಿತ್ರರಂಗ ಕಾಯುತ್ತಿದೆ.
ಗಾಂಧಿನಗರದಲ್ಲಿ ಈಗ ಮೊದಲಿದ್ದ ವೈಭವ ಇಲ್ಲ. ಕೊರೊನಾ ಹಾವಳಿಯಿಂದಾಗಿ ಚಿತ್ರಮಂದಿರಗಳು ಬಿಕೋ ಎನ್ನುತ್ತಿವೆ. ಸದ್ಯಕ್ಕೆ ಕೇವಲ ಶೇ.50ರಷ್ಟು ಆಸನ ಭರ್ತಿಗೆ ಮಾತ್ರ ಅವಕಾಶ ಇದೆ. ಆದರೆ ಶೀಘ್ರದಲ್ಲೇ ಶೇ.100ರಷ್ಟು ಆಸನ ಭರ್ತಿಗೆ ಅನುಮತಿ ಸಿಗುವ ಸಾಧ್ಯತೆ ಇದೆ. ಸರ್ಕಾರದಿಂದ ಬರಲಿರುವ ಆ ಒಂದು ಆದೇಶಕ್ಕಾಗಿ ಇಡೀ ಚಿತ್ರರಂಗ ಕಾದು ಕುಳಿತಿದೆ. ಈ ಹಿನ್ನೆಲೆಯಲ್ಲಿ ಭರ್ಜರಿ ತಯಾರಿ ಕೂಡ ಮಾಡಿಕೊಳ್ಳಲಾಗುತ್ತಿದೆ. ಮೊದಲಿನ ವೈಭವ ಮರುಕಳಿಸಲು ದಿನಗಣನೆ ಶುರುವಾಗಿದೆ.
ಸ್ಯಾಂಡಲ್ವುಡ್ನಲ್ಲಿ ಅನೇಕ ಸ್ಟಾರ್ ಸಿನಿಮಾಗಳು ರಿಲೀಸ್ಗೆ ರೆಡಿ ಆಗಿವೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಗಣೇಶ ಚತುರ್ಥಿ ಸಂದರ್ಭದಲ್ಲಿಯೇ ಆ ಸಿನಿಮಾಗಳು ರಿಲೀಸ್ ಆಗಿ ಧೂಳೆಬ್ಬಿಸಬೇಕಿತ್ತು. ಆದರೆ ಕೊರೊನಾದಿಂದ ಅದು ಸಾಧ್ಯವಾಗಲಿಲ್ಲ. ಶಿವರಾಜ್ಕುಮಾರ್ ಅಭಿನಯದ ‘ಭಜರಂಗಿ 2’, ದುನಿಯಾ ವಿಜಯ್ ನಟನೆಯ ‘ಸಲಗ’, ಕಿಚ್ಚ ಸುದೀಪ್ ನಟನೆಯ ‘ಕೋಟಿಗೊಬ್ಬ 3’ ಸೇರಿದಂತೆ ಅನೇಕ ಚಿತ್ರಗಳು ಬಿಡುಗಡೆಗೆ ಸಜ್ಜಾಗಿವೆ.
ಇದನ್ನೂ ಓದಿ:
Kichcha Sudeep: ‘ಕೋಟಿಗೊಬ್ಬ 3’ ಚಿತ್ರದ ಓಟಿಟಿ ರಿಲೀಸ್ ಬಗ್ಗೆ ಬಹುಕೋಟಿ ಗಾಸಿಪ್; ಚಿತ್ರತಂಡದ ಸ್ಪಷ್ಟನೆ ಏನು?
Shivarajkumar: ‘ಭಜರಂಗಿ 2’ ರಿಲೀಸ್ ಡೇಟ್ ಮುಂದೂಡಿಕೆ; ಕೊರೊನಾ ಭೀತಿಯಿಂದ ಚಿತ್ರತಂಡದ ನಿರ್ಧಾರ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ

