ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ

|

Updated on: Nov 22, 2024 | 7:06 AM

ಈ ವಿಡಿಯೋ 12 ರಾಶಿಗಳಿಗೆ ಇಂದಿನ ದಿನದ ಭವಿಷ್ಯವನ್ನು ಒಳಗೊಂಡಿದೆ. ಪ್ರತಿಯೊಂದು ರಾಶಿಗೂ ಆರ್ಥಿಕ, ವೃತ್ತಿಪರ, ಆರೋಗ್ಯ ಮತ್ತು ವೈಯಕ್ತಿಕ ಜೀವನದ ಮೇಲೆ ಪರಿಣಾಮ ಬೀರುವ ಮುಖ್ಯಾಂಶಗಳನ್ನು ವಿವರಿಸಲಾಗಿದೆ. ಪ್ರತಿ ರಾಶಿಯವರಿಗೂ ಸಲಹೆಗಳನ್ನು ನೀಡಲಾಗಿದೆ ಮತ್ತು ದಿನವನ್ನು ಉತ್ತಮವಾಗಿ ಕಳೆಯಲು ಮಾರ್ಗಸೂಚಿಗಳನ್ನು ಒದಗಿಸಲಾಗಿದೆ. ಪ್ರತಿಯೊಂದು ರಾಶಿ ಚಿಹ್ನೆಯ ಒಳಿತು ಮತ್ತು ಕೆಡುಕುಗಳನ್ನು ಸಮತೋಲನದಿಂದ ವಿವರಿಸಲಾಗಿದೆ.

ಒಬ್ಬ ಮನುಷ್ಯ ಹುಟ್ಟಿದ ಕ್ಷಣದಿಂದ ಹಿಡಿದು ಆತ ಸಾಯುವ ಕ್ಷಣದವರೆಗೆ 12 ಜ್ಯೋತಿಷ್ಯ ರಾಶಿಗಳು ಮನುಷ್ಯನ ದೈನಂದಿನ ಜೀವನದ ಮೇಲೆ ಪ್ರಭಾವ ಬೀರುತ್ತವೆ. ಗ್ರಹಗತಿಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನದಲ್ಲಿ ಋಣಾತ್ಮಕ ಪರಿಣಾಮಗಳು ಉಂಟುಮಾಡಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅವಶ್ಯಕವಾಗಿದೆ. 2024 ನವೆಂಬರ್​ 21 ಗುರುವಾರ ರಾಶಿ ಭವಿಷ್ಯ (Horoscope) ಹೇಗಿದೆ? ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ.ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಅನುರಾಧಾ, ಮಾಸ: ಕಾರ್ತಿಕ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಆಶ್ಲೇಷಾ, ಯೋಗ: ಬ್ರಹ್ಮ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 38 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 05 ಗಂಟೆ 59 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:54 ರಿಂದ ಮಧ್ಯಾಹ್ನ 12:19ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:09 ರಿಂದ 04:34 ರವರೆಗೆ, ಗುಳಿಕ ಕಾಲ ಬೆಳಗ್ಗೆ 08:03 ರಿಂದ 09:29 ರವರೆಗೆ.

Published on: Nov 22, 2024 06:51 AM