ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ಆಗಮಿಸಿರುವ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಕಾಂಗ್ರೆಸ್ ಕಾರ್ಯಕಾರಿಣಿ ಸಮತಿ ಸಭೆಯಲ್ಲಿ ಭಾಗಿಯಾಗಲು ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿಗೆ ಆಗಮಿಸಿದ್ದಾರೆ. ನಾವು ಯಾವಾಗಲೂ ಹೇಳುವ ಹಾಗೆ ಸಿದ್ದರಾಮಯ್ಯನವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ ಇವತ್ತು ಸಹ ಅವರೊಂದಿಗಿದ್ದರು
ದೆಹಲಿ: ನಿನ್ನೆ ಎನ್ ಡಿಎ ಸಭೆಯಲ್ಲಿ ಭಾಗವಹಿಸಲು ರಾಜ್ಯದಿಂದ ಆಯ್ಕೆಯಾದ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ದೆಹಲಿಗೆ ಆಗಮಿಸಿದ್ದರು. ಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು (PM Narendra Modi) ಎನ್ ಡಿ ಎ ಸಂಸದೀಯ ಮಂಡಳಿ ನಾಯಕನಾಗಿ ಅಯ್ಕೆ ಮಾಡಲಾಯಿತು ಮತ್ತು ನಾಳೆ ಅವರರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇವತ್ತು ಸಭೆ ನಡೆಸುವ ಸರದಿ ಕಾಂಗ್ರೆಸ್ ಪಕ್ಷದ್ದು. ಕಾಂಗ್ರೆಸ್ ಕಾರ್ಯಕಾರಿಣಿ ಸಮತಿ (CWC meeting) ಸಭೆಯಲ್ಲಿ ಭಾಗಿಯಾಗಲು ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ದೆಹಲಿಗೆ ಆಗಮಿಸಿದ್ದಾರೆ. ನಾವು ಯಾವಾಗಲೂ ಹೇಳುವ ಹಾಗೆ ಸಿದ್ದರಾಮಯ್ಯನವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ ಇವತ್ತು ಸಹ ಅವರೊಂದಿಗಿದ್ದರು. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಬೈಟ್ ಪಡೆಯಲು ಮಾಧ್ಯಮ ಪ್ರತಿನಿಧಿಗಳು ಪ್ರಯತ್ನಿಸಿದರಾದರೂ ಅವರಿಬ್ಬರೂ ಮಾತಾಡಲಿಲ್ಲ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಕಿರಿಯ ವಯಸ್ಸಿನ ಸಂಸದನಾಗಿರುವೆ, ಶ್ರಮವಹಿಸಿ ಜನಸೇವೆ ಮಾಡು ಅಂತ ಸಿದ್ದರಾಮಯ್ಯ ಸರ್ ಹೇಳಿದ್ದಾರೆ: ಸಾಗರ್ ಖಂಡ್ರೆ