ಮತಎಣಿಕೆ ಕಾರ್ಯ ಸುಸೂತ್ರವಾಗಿ ನಡೆಯಲಿಯೆಂದು ಡಾ ಮಂಜುನಾಥ್ ಚುನಾವಣಾ ಆಯೋಗಕ್ಕೆ ಬರೆದಿದ್ದಾರೆ: ನಿಖಿಲ್ ಕುಮಾರಸ್ವಾಮಿ

|

Updated on: Jun 03, 2024 | 4:44 PM

ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಸಾಕಷ್ಟು ಹಾನಿಯುಂಟಾಗಿದೆ, ರಸ್ತೆಗಳಲ್ಲಿ ಗಿಡಮರಗಳು ಉರುಳಿ ಬಿದ್ದಿವುದನ್ನು ನೋಡಿದೆವು, ಮಳೆಯಿಂದ ಹಾನಿ ಅನುಭವಿಸಿರುವವರ ಬಗ್ಗೆ ಸರ್ಕಾರ ಕಾಳಜಿವಹಿಸಿ ಅವರಿಗೆ ನೆರವಾಗಬೇಕು, ನಷ್ಟ ಭರಿಸಿಕೊಡಬೇಕು ಎಂದು ನಿಖಿಲ್ ಹೇಳಿದರು.

ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ಸಿಎನ್ ಮಂಜುನಾಥ್ (Dr CN Manjunath) ಅವರಿಗೆ ಆತಂಕವೇನೂ ಇಲ್ಲ ಆದರೆ ಮತಗಳ ಎಣಿಕೆ ಕಾರ್ಯ ಶಾಂತಿಯುತವಾಗಿ ನಡೆಯಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ಮುಂಜಾಗ್ರತೆ ವಹಿಸಲಿ ಎಂದಯ ರಾಜ್ಯ ಚುನಾವಣಾ ಅಯೋಗಕ್ಕೆ (Election Commission) ಪತ್ರ ಬರೆದಿದ್ದಾರೆ ಎಂದು ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಸಾಕಷ್ಟು ಹಾನಿಯುಂಟಾಗಿದೆ, ರಸ್ತೆಗಳಲ್ಲಿ ಗಿಡಮರಗಳು ಉರುಳಿ ಬಿದ್ದಿವುದನ್ನು ನೋಡಿದೆವು, ಮಳೆಯಿಂದ ಹಾನಿ ಅನುಭವಿಸಿರುವವರ ಬಗ್ಗೆ ಸರ್ಕಾರ ಕಾಳಜಿವಹಿಸಿ ಅವರಿಗೆ ನೆರವಾಗಬೇಕು, ನಷ್ಟ ಭರಿಸಿಕೊಡಬೇಕು ಎಂದು ನಿಖಿಲ್ ಹೇಳಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸಚಿವ ಬಿ ನಾಗೇಂದ್ರ ಹಣಕಾಸಿನ ದುರ್ವ್ಯವಹಾರ ನಡೆಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ, ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ತಮ್ಮ ಪಕ್ಷ ಆಗ್ರಹಿಸುತ್ತದೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಮಂಡ್ಯ ಲೋಕಸಭಾ ಕಣದಿಂದ ಹಿಂದೆ ಸರಿದಿದ್ದ ನಿಖಿಲ್ ಕುಮಾರಸ್ವಾಮಿ ಯೂಟರ್ನ್​

Follow us on